ಲಾಕ್ ಡೌನ್ ನಡುವೆಯೂ ಸತತ 2ನೇ ದಿನ 6 ಸಾವಿರ ಹೊಸ ಪ್ರಕರಣ: ಅಗ್ರ 10 ದೇಶಗಳಲ್ಲಿ ಭಾರತ

ಸತತ ಎರಡನೇ ದಿನ ಆರು ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಅತಿ ಹೆಚ್ಚು ಮಂದಿಗೆ ಕೊರೊನಾ ತಗುಲಿರುವ ಅಗ್ರ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಗುರುತಿಸಿಕೊಂಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಸತತ ಎರಡನೇ ದಿನ ಆರು ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಅತಿ ಹೆಚ್ಚು ಮಂದಿಗೆ ಕೊರೊನಾ ತಗುಲಿರುವ ಅಗ್ರ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಗುರುತಿಸಿಕೊಂಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 1,37,000 ದಾಟಿದ್ದು, ಸಾವಿನ ಸಂಖ್ಯೆ 4,000 ಗಡಿ ದಾಟಿದೆ. ವೈರಸ್​ ನಿಯಂತ್ರಣಕ್ಕೆ ಬರದ ಹೊರತಾಗಿಯೂ ಸರ್ಕಾರ ಲಾಕ್​ಡೌನ್​ ಸಡಿಲಿಕೆ ಮಾಡಿದ್ದು, ಇದು ಸೋಂಕು ಹೆಚ್ಚಲು ರಹದಾರಿ ಮಾಡಿಕೊಟ್ಟಂತಾಗಿದೆ. ಈ ಮಧ್ಯೆ ವಿಶ್ವದಲ್ಲಿ ಅತಿ ಹೆಚ್ಚು ಪೀಡಿತರಿರುವ ದೇಶಗಳ ಸಾಲಿನಲ್ಲಿ ಭಾರತ 10ನೇ ಸ್ಥಾನಕ್ಕೆ ಏರಿದೆ.

ವಿಶ್ವದಲ್ಲಿ 54 ಲಕ್ಷ ಜನರಲ್ಲಿ ಕೊರೋನಾ ವೈರಸ್​ ಇದೆ. ಈ ಪೈಕಿ 3.46 ಲಕ್ಷ ಜನರು ಕೊರೋನಾ ವೈರಸ್​ಗೆ ಮೃತಪಟ್ಟಿದ್ದಾರೆ. ಈ ಪೈಕಿ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1.38 ಲಕ್ಷ ಇದೆ. ನಿನ್ನೆ ಒಂದೇ ದಿನ 6,700 ಪ್ರಕರಣ ದಾಖಲಾಗಿತ್ತು. ಈ ಮೂಲಕ ಒಂದೇ ದಿನದಲ್ಲಿ ಇಷ್ಟೊಂದು ಪ್ರಕರಣ ದಾಖಲಾಗಿದ್ದು ಇದೇ ಮೊದಲು.

ಎರಡು ವಾರಗಳ ಹಿಂದೆ 14ನೇ ಸ್ಥಾನದಲ್ಲಿದ್ದ ಭಾರತ ಈಗ 10ನೇ ಸ್ಥಾನಕ್ಕೆ ಏರಿಕೆ ಆಗಿದೆ. ಶೀಘ್ರವೇ ಟರ್ಕಿ, ಜರ್ಮನಿ ಹಾಗೂ ಫ್ರಾನ್ಸ್​ ದೇಶವನ್ನು ಭಾರತ ಹಿಂದಿಕ್ಕುವ ಲಕ್ಷಣ ಗೋಚರವಾಗಿದೆ.

16 ಲಕ್ಷ ಸೋಂಕಿತರನ್ನು ಹೊಂದುವ ಮೂಲಕ ಅಮೆರಿಕ ಮೊದಲ ಸ್ಥಾನದಲ್ಲಿ ಇದ್ದರೆ, 3.63 ಲಕ್ಷ ಸೋಂಕಿತರಿರುವ ಬ್ರೆಜಿಲ್​ ಎರಡನೇ ಹಾಗೂ 3.44 ಲಕ್ಷ ಸೋಂಕಿತರಿರುವ ರಷ್ಯಾ ಮೂರನೇ ಸ್ಥಾನದಲ್ಲಿದೆ.

ಏಷ್ಯಾದ ಅತಿ ದೊಡ್ಡ ಕೊಳಗೇರಿ ಎಂದೇ ಪರಿಗಣಿಸಲಾಗಿರುವ ಮುಂಬೈನ ಧಾರಾವಿ ಸಮಸ್ಯೆಯ ಕೇಂದ್ರ ಬಿಂದುವಾಗಿದೆ. ಭಾನುವಾರ ಮಹಾರಾಷ್ಟ್ರದಲ್ಲಿ 3,000ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com