ದೆಹಲಿಯ ತುಘಲಕಾಬಾದ್ ಕೊಳಗೇರಿಯಲ್ಲಿ ಅಗ್ನಿ ಅವಘಡ, 250ಕ್ಕೂ ಹೆಚ್ಚು ಗುಡಿಸಲು ಭಸ್ಮ

ರಾಜಧಾನಿ ದೆಹಲಿಯ ತುಘ್ಲಖಾಬಾದ್ ಕೊಳಗೇರಿ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಉಂಟಾಗಿ 250ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:ರಾಜಧಾನಿ ದೆಹಲಿಯ ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಉಂಟಾಗಿ 250ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಈ ಬಗ್ಗೆ ಐಎಎನ್ ಎಸ್ ಸುದ್ದಿಸಂಸ್ಥೆಗೆ ತಿಳಿಸಿದ ಮುಖ್ಯ ಅಗ್ನಿಶಾಮಕ ಅಧಿಕಾರಿ ಅತುಲ್ ಗಾರ್ಗ್ ಕೊಳಚೇರಿ ಪ್ರದೇಶದಲ್ಲಿ ಮಧ್ಯರಾತ್ರಿ 12.15ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಸುದ್ದಿ ತಿಳಿದ ಕೂಡಲೇ 28 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿತು. ನಸುಕಿನ ಜಾವ 4 ಗಂಟೆ ಸುಮಾರಿಗೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಯಿತು ಎಂದು ತಿಳಿಸಿದ್ದಾರೆ.

ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ 500ಕ್ಕೂ ಹೆಚ್ಚು ಗುಡಿಸಲುಗಳಿದ್ದು ಅವುಗಳಲ್ಲಿ 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಎತ್ತರದ ಪ್ರದೇಶದಲ್ಲಿ ಗುಡಿಸಲುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ತಲುಪಲು ಸ್ವಲ್ಪ ಸಮಯ ಹಿಡಿಯಿತು, ಬೆಳಗ್ಗೆ 8 ಗಂಟೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು ಎಂದಿದ್ದಾರೆ.

ಗುಡಿಸಲುಗಳಲ್ಲಿ ಕೆಲವರು ಮಾತ್ರ ವಾಸಿಸುತ್ತಿದ್ದರು. ಬೆಂಕಿ ಹತ್ತಿ ಉರಿಯುತ್ತಿದ್ದಂತೆ ಹೊರಬಂದಿದ್ದರಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಗಾರ್ಗ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com