ಸಾಲಗಳ ಮೇಲಿನ ಬಡ್ಡಿ ಪ್ರಶ್ನಿಸಿ ಅರ್ಜಿ: ಕೇಂದ್ರಸರ್ಕಾರ, ಆರ್ ಬಿಐಗೆ ನೋಟಿಸ್ ನೀಡಿದ ಸುಪ್ರೀಂ!

ನಿಷೇಧದ ವೇಳೆಯಲ್ಲಿ ಸಾಲಗಳ ಮೇಲಿನ ಬಡ್ಡಿಯನ್ನು ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ನಿಷೇಧದ ವೇಳೆಯಲ್ಲಿ ಸಾಲಗಳ ಮೇಲಿನ ಬಡ್ಡಿಯನ್ನು ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಕೇಂದ್ರ ಸರ್ಕಾರ ಹಾಗೂ ಆರ್ ಬಿಐ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಸೂಚಿಸಿದೆ.

ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಲದ ಮೇಲಿನ ಬಡ್ಡಿ ಪಾವತಿ ಗಡುವನ್ನು ಮತ್ತೆ ಮೂರು ತಿಂಗಳವರೆಗೂ ಅಂದರೆ ಆಗಸ್ಟ್ 31ರವರೆಗೂ ವಿಸ್ತರಿಸಲಾಗಿದೆ.

ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅಶೋಕ್ ಭೂಷಣ್ ನೇತೃತ್ವದ ಏಕ ಸದಸ್ಯ ಪೀಠ, ವಾರದೊಳಗೆ ಈ ಅರ್ಜಿ ಸಂಬಂಧ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ಗೆ ನೋಟಿಸ್ ನೀಡಿದೆ.

ನಿರ್ಬಂಧದ ವೇಳೆಯಲ್ಲಿ ಬ್ಯಾಂಕುಗಳು ಸಾಲದ ಮೊತ್ತಕ್ಕೆ ಹೆಚ್ಚುವರಿ ಬಡ್ಡಿಯನ್ನು ಸೇರಿಸಬಾರದು, ಸಾಲಗಾರರಿಗೆ ದಂಡ ಹಾಕಬಾರದು ಎಂದು ಅರ್ಜಿದಾರರ ಪರ ವಕೀಲರು ವಾದ ಮಾಡಿದರು.

ಕೌಂಟರ್ ಅಫಿಡವಿಟ್ ಸಲ್ಲಿಸಲು ಒಂದು ವಾರದ ಸಮಯವನ್ನು ಆರ್ ಬಿಐ ವಕೀಲರು ಕೇಳಿಕೊಂಡರು. ಆದ್ದರಿಂದ ಮುಂದಿನ ವಾರಕ್ಕೆ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com