ಕ್ವಾರಂಟೈನ್ ಭಯಾನಕತೆ: ಹಾವು ಕಚ್ಚಿ ಬಾಲಕಿ ಸಾವು!

ನೈನಿತಾಲ್ ನಲ್ಲಿನ ಕ್ವಾರಂಟೈನ್ ಕೇಂದ್ರವೊಂದರಲ್ಲಿ ಆರು ವರ್ಷದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಸಂಬಂಧ ಮೂವರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ವಾರಂಟೈನ್ ಕೇಂದ್ರದ ಸಾಂದರ್ಭಿಕ ಚಿತ್ರ
ಕ್ವಾರಂಟೈನ್ ಕೇಂದ್ರದ ಸಾಂದರ್ಭಿಕ ಚಿತ್ರ

ಉತ್ತರ್ ಖಂಡ್: ನೈನಿತಾಲ್ ನಲ್ಲಿನ ಕ್ವಾರಂಟೈನ್ ಕೇಂದ್ರವೊಂದರಲ್ಲಿ ಆರು ವರ್ಷದ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈ ಸಂಬಂಧ ಮೂವರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕ್ವಾರಂಟೈನ್ ಕೇಂದ್ರದಲ್ಲಿ ಹಾಸಿಗೆಗಳ ಕೊರತೆಯಿಂದಾಗಿ ಆ ಬಾಲಕಿ ತನ್ನ ಕುಟುಂಬದೊಂದಿಗೆ ನೆಲದ ಮೇಲೆ ಮಲಗಿರುವಾಗ ಸೋಮವಾರ ಮುಂಜಾನೆ ಈ ಘಟನೆ ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್ ಹೇಳಿದ್ದಾರೆ. 

ಬೆಟಲ್ ಘಾಟ್ ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಾಲಕಿಯನ್ನು ಕರೆದೊಯ್ಯಲಾಗಿದ್ದು, ಅಲ್ಲಿ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಟಲ್ ಘಾಟ್ ನ ಶಾಲಾ ಕಟ್ಟಡವೊಂದನ್ನು ಕ್ವಾರಂಟೈನ್ ಕೇಂದ್ರವನ್ನಾಗಿ ಪರಿವರ್ತಿಸಲಾಗಿತ್ತು.ಅಲ್ಲಿ ಈ ಘಟನೆ ನಡೆದಿದೆ.

ದೆಹಲಿಯಿಂದ ವಾಪಸ್ ಬಂದಿದ್ದ ಆ ಬಾಲಕಿಯ ಕುಟುಂಬವನ್ನು ಶಾಲಾ ಕಟ್ಟಡದಲ್ಲಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಕ್ವಾರಂಟೈನ್ ಕೇಂದ್ರದ ಸುತ್ತ ಪೊದೆಗಳಿರುವ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಕ್ವಾರಂಟೈನ್ ನಲ್ಲಿ ಇದ್ದವರು ಆರೋಪಿಸಿದ್ದಾರೆ. 

ಕ್ವಾರಂಟೈನ್ ಕೇಂದ್ರದಲ್ಲಿ ನೀರಿನ ಕೊರತೆ, ಕೊಳಕು ಸ್ವಚ್ಛತಾ ಕೊಠಡಿಗಳ ಬಗ್ಗೆ ಜನರು ದೂರು ದಾಖಲಿಸಿದ್ದು, ಅಸಮರ್ಪಕ ನಿರ್ವಹಣೆಯಿಂದಾಗಿ ಬಾಲಕಿಗೆ ಹಾವು ಹಚ್ಚಿದೆ ಎಂದು ಕ್ವಾರಂಟೈನ್ ಕೇಂದ್ರದಲ್ಲಿ ಇದ್ದವರು ಹೇಳುತ್ತಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com