ಜಾರ್ಖಂಡ್: ಎನ್ ಕೌಂಟರ್ ನಲ್ಲಿ ಮೂವರು ನಕ್ಸಲೀಯರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

ಇಲ್ಲಿನ ಪಶ್ಚಿಮ ಸಿಂಗ್ ಭೂಮ್ ನಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಾರ್ಖಂಡ್: ಇಲ್ಲಿನ ಪಶ್ಚಿಮ ಸಿಂಗ್ ಭೂಮ್ ನಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರನ್ನು ಹತ್ಯೆಗೈಯಲಾಗಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ರಾಜ್ಯ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ಇದಾಗಿದ್ದು ಮತ್ತೊಬ್ಬ ನಕ್ಸಲ್ ಗಾಯಗೊಂಡಿದ್ದಾನೆ. ಸದ್ಯ ಪೊಲೀಸರು ಎನ್ ಕೌಂಟರ್ ನಡೆದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ಮಹಾ ನಿರ್ದೇಶಕ ಸಾಕೇತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com