ಕೊರೋನಾ ವಜ್ರಮುಷ್ಠಿಯಲ್ಲಿ ಭಾರತ: ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆ

ಡೆಡ್ಲಿ ಕೊರೋನಾ ವೈರಸ್ ದಾಳಿ ಭಾರತದಲ್ಲಿ ಮುಂದುವರೆದಿದ್ದು, ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಡೆಡ್ಲಿ ಕೊರೋನಾ ವೈರಸ್ ದಾಳಿ ಭಾರತದಲ್ಲಿ ಮುಂದುವರೆದಿದ್ದು, ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ 6,566 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 194 ಮಂದಿ ಮೃತಪಟ್ಟಿದ್ದಾರೆಂದು ತಿಳಿಸಿದೆ. 

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,58,333ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 4,531ಕ್ಕೆ ತಲುಪಿದೆ. ಈ ನಡುವೆ 1,58,333 ಮಂದಿ ಸೋಂಕಿತರ ಪೈಕಿ 67,692 ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿನ್ನೂ 86,110 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಇನ್ನು ಮಹಾರಾಷ್ಟ್ರ ಒಂದು ರಾಜ್ಯದಲ್ಲಿಯೇ ಅತೀ ಹೆಚ್ಚು 56,948 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ತಮಿಳುನಾಡು 18,545, ಗುಜರಾತ್ 15,195, ದೆಹಲಿಯಲ್ಲಿ 15,257 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com