ದೇಶದಲ್ಲಿ ಒಂದೇ ದಿನ 7,466 ಮಂದಿಯಲ್ಲಿ ಕೊರೋನಾ ವೈರಸ್ ದೃಢ, ಸೋಂಕಿತರ ಸಂಖ್ಯೆ 1.65 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ಒಂದೇ ದಿನ ಬರೋಬ್ಬರಿ 7,466 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1.65 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ಒಂದೇ ದಿನ ಬರೋಬ್ಬರಿ 7,466 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1.65 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಮಾಹಿತಿ ನೀಡಿದೆ. 

4ನೇ ಹಂತದ ಲಾಕ್'ಡೌನ್ ತೆರವಿಗೆ ದೇಶ ಸಜ್ಜಾಗಿರುವ ಹೊತ್ತಿನಲ್ಲೇ ಶುಕ್ರವಾರ ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ. 

ಕಳೆದ 24 ಗಂಟೆಗಳಲ್ಲಿ 7,466 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಒಂದು ದಿನದಲ್ಲಿ ದಾಖಲಾದ ಗರಿಷ್ಠ ಸಂಖ್ಯೆಯಾಗಿದೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,65,799ಕ್ಕೆ ಏರಿಕೆಯಾಗಿದೆ. 

ಈ ನಡುವೆ 1,65 ಲಕ್ಷ ಸೋಂಕಿತರ ಪೈಕಿ ಈವರೆಗೂ 71, 105 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರದೇಶದ ದೇಶದಲ್ಲಿನ್ನೂ 89987 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಇನ್ನು ನಿನ್ನೆ ಒಂದೇ 175 ಮಂದಿ ಸಾವನ್ನಪ್ಪುವುದರೊಂದಿಗೆ ಈ ವರೆಗೆ ವೈರಸ್'ಗೆ ಬಲಿಯಾದವರ ಸಂಖ್ಯೆ 4706ಕ್ಕೆ ತಲುಪಿದೆ. 

ಉಳಿದಂತೆ ಮಹಾರಾಷ್ಟ್ರದಲ್ಲಿ 2598, ದೆಹಲಿಯಲ್ಲಿ 1024, ತಮಿಳುನಾಡಿನಲ್ಲಿ 827, ಗುಜರಾತ್ ನಲ್ಲಿ 367, ಮಧ್ಯಪ್ರದೇಶದಲ್ಲಿ 192 ಹೊಸ ಪ್ರಕಱಣಗಳು ದಾಖಲಾಗಿವೆ

ಜಾಗತಿಕ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದ ಭಾರತ
ಇದೇ ವೇಳೆ ಇತ್ತೀಚೆಗಷ್ಟೇ ಅತೀ ಹೆಚ್ಚು ಸೋಂಕಿತರ ಜಾಗತಿಕ ಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಏರಿದ್ದ ಭಾರತ, ಇದೀಗ ಟರ್ಕಿಯನ್ನು ಹಿಂದಿಕ್ಕಿ 9ನೇ ಸ್ಥಾನಕ್ಕೆ ಏರಿದೆ. 

ಮೇ.25ರಂದು 1.42 ಲಕ್ಷ ಸೋಂಕಿತರ ಮೂಲಕ ಇರಾನ್ ಹಿಂದಿಕ್ಕಿ ಭಾರತ ಟಾಪ್ 10ಕ್ಕೆ ಬಂದಿತ್ತು. ಆದಾದ 4 ದಿನದಲ್ಲಿ 18,000 ಕೇಸಿನೊಂದಿಗೆ ಮತ್ತೊಂದು ಸ್ಥಾನ ಮೇಲಕ್ಕೇರಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com