ಲಾಕ್ ಡೌನ್ ವಿಸ್ತರಣೆ? ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಅಭಿಪ್ರಾಯ ಕೇಳಿದ ಅಮಿತ್ ಶಾ

ಮೇ 31ರ ನಂತರ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಬೇಕೆ, ಬೇಡವೇ, ಹೊಸ ರೂಪದಲ್ಲಿ ಹೇಗೆ ಮಾಡಬಹುದು ಎಂಬ ಬಗ್ಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡುವಂತೆ ಕೇಂದ್ರ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆ.
ಅಮಿತ್ ಶಾ
ಅಮಿತ್ ಶಾ

ನವದೆಹಲಿ: ಮೇ 31ರ ನಂತರ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾಡಬೇಕೆ, ಬೇಡವೇ, ಹೊಸ ರೂಪದಲ್ಲಿ ಹೇಗೆ ಮಾಡಬಹುದು ಎಂಬ ಬಗ್ಗೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆಗಳನ್ನು ನೀಡುವಂತೆ ಕೇಂದ್ರ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆ.

ಈ ಸಂಬಂಧ ದೂರವಾಣಿ ಮೂಲಕ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಾತನಾಡಿದ ಅವರು ಲಾಕ್ ಡೌನ್ ವಿಚಾರವಾಗಿ ಮಾತನಾಡಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ದೇಶಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಮುಗಿಯುವುದಕ್ಕೆ ಇನ್ನು ಮೂರು ದಿನಗಳು ಬಾಕಿಯಿದ್ದು ಈ ಸಂದರ್ಭದಲ್ಲಿ ಆಯಾ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ಅಲ್ಲಿನ ಸರ್ಕಾರಗಳು ತೆಗೆದುಕೊಳ್ಳುವ ತೀರ್ಮಾನಗಳು ಮುಖ್ಯವಾಗಿರುತ್ತದೆ.

ಕೊರೋನಾ ವೈರಸ್ ನ್ನು ತಡೆಗಟ್ಟಲು ಮಾರ್ಚ್ 25ರಂದು ಮೊದಲ ಬಾರಿಗೆ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ನಂತರ ಅದನ್ನು ಮೂರು ಬಾರಿ ವಿಸ್ತರಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com