ಮೇ.31ಕ್ಕೆ ಕೊರೋನಾ ಲಾಕ್'ಡೌನ್ ಮುಕ್ತಾಯ: ಪ್ರಧಾನಿ ಮೋದಿ ಭೇಟಿಯಾದ ಅಮಿತ್ ಶಾ, ಮಹತ್ವದ ಮಾತುಕತೆ

ಕೊರೋನಾ ಲಾಕ್'ಡೌನ್ ಮೇ,31ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 
ಪ್ರಧಾನಿ ಮೋದಿ, ಅಮಿತ್ ಶಾ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ, ಅಮಿತ್ ಶಾ (ಸಂಗ್ರಹ ಚಿತ್ರ)

ನವದೆಹಲಿ: ಕೊರೋನಾ ಲಾಕ್'ಡೌನ್ ಮೇ,31ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಭೇಟಿ ಮಾಡಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಆರ್ಥಿಕ ಚಟುವಟಿಕೆ ಹಾಗೂ ಹೆಚ್ಚುತ್ತಿರುವ ಕೊರೋನಾ ಸೋಂಕಿತ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಯಾವ ರೀತಿಯ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

ನಮುಂದಿನ ದಿನಗಳಲ್ಲೂ ಲಾಕ್'ಡೌನ್ ವಿಸ್ತರಿಸಬೇಕೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಗೃಹ ಸಚಿವ ಅಮಿತ್ ಶಾ ಅವರು ಖುದ್ದಾಗಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದರು. 

ಸಾಮಾನ್ಯವಾಗಿ ಇಂತಹ ವಿಚಾರಗಳ ಬಗ್ಗೆ ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸುತ್ತಾರೆ. ಆದರೆ, ಈ ಬಾರಿ ಕೇಂದ್ರ ಗೃಹ ಸಚಿವರೇ ಖುದ್ದಾಗಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಲ ಜೊತೆ ನಡೆಸಿದ್ದು, ಈ ವೇಳೆ ಜೂ.1ರಿಂದ ಯಾವೆಲ್ಲಾ ರಾಜ್ಯಗಳಲ್ಲಿ ಯಾವೆಲ್ಲಾ ವಲಯಗಳನ್ನು ಆರಂಭಿಸಬಹುದು ಎಂಬ ಮಾಹಿತಿಯನ್ನು ಕ್ರೋಡೀಕರಿಸಿದ್ದಾರೆ. 

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಇಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರುವ ಶಾ, ಅವರು ಈ ಕುರಿತಂತೆಯೂ ಮಾತುಕತೆ ನಡೆಸಿರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com