ಹಲವು ಐತಿಹಾಸಿಕ ತಪ್ಪುಗಳನ್ನು ಪಿಎಂ ಮೋದಿ ಕಳೆದ ಆರು ವರ್ಷಗಳಲ್ಲಿ ಸರಿಪಡಿಸಿದ್ದಾರೆ: ಅಮಿತ್ ಶಾ

ಕಳೆದ ಆರು ವರ್ಷಗಳಲ್ಲಿ ಆಗಿರುವ ಹಲವು ಐತಿಹಾಸಿಕ ತಪ್ಪುಗಳನ್ನು ಪ್ರಧಾನಿ ಮೋದಿ ಸರಿಪಡಿಸಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ
ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ಮೋದಿ

ನವದೆಹಲಿ: ಕಳೆದ ಆರು ವರ್ಷಗಳಲ್ಲಿ ಆಗಿರುವ ಹಲವು ಐತಿಹಾಸಿಕ ತಪ್ಪುಗಳನ್ನು ಪ್ರಧಾನಿ ಮೋದಿ ಸರಿಪಡಿಸಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದ್ದಾರೆ.

ನರೇಂದ್ರ ಮೋದಿ 2.0 ಸರ್ಕಾರಕ್ಕೆ ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ದೇಶದ ಜನತೆಯನ್ನುದ್ದೇಶಿಸಿ ಪತ್ರ ಬರೆದಿದ್ದರು. ಈ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ, ಜನರ ಮನೆ ಬಾಗಿಲಿಗೆ ಹೋಗಿ ಪ್ರಚಾರ, ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಹೇಳಿದರು.

ಹಲವು ಸಾಧನೆಗಳಿಗೆ ಸಾಕ್ಷಿಯಾಗಿರುವ ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು. ನಿಮ್ಮ ಸಮರ್ಥ ದೂರದೃಷ್ಟಿಯ ನಾಯಕತ್ವದಡಿ ಭಾರತ ಮುಂದೆ ಕೂಡ ಪ್ರಗತಿಯನ್ನು ಸಾಧಿಸಲಿದೆ ಎಂದು ಬರೆದು ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದಂತಹ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುವುದನ್ನು ಅಮಿತ್ ಶಾ ಬಿಟ್ಟಿಲ್ಲ. ಕಳೆದ ಆರು ವರ್ಷಗಳಲ್ಲಿ ಮೋದಿಯವರು ಹಲವು ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಿದ್ದು ಮಾತ್ರವಲ್ಲದೆ ಸ್ವಾವಲಂಬಿ ಭಾರತಕ್ಕೆ ಅಡಿಪಾಯವನ್ನು ಹಾಕಿದ್ದಾರೆ. ಕಳೆದ ಆರು ವರ್ಷಗಳ ಆಡಳಿತವು ಬಡವರ ಕಲ್ಯಾಣಕ್ಕೆ ಅದ್ಭುತ ಉದಾಹರಣೆಯಾಗಿದೆ ಎಂದಿದ್ದಾರೆ.

ಮೋದಿಯವರನ್ನು ಪ್ರಧಾನಿಯಾಗಿ ಮಾಡಲು ಸಹಕರಿಸಿದ ಎಲ್ಲ ಭಾರತೀಯರಿಗೆ ಈ ಸಂದರ್ಭದಲ್ಲಿ ಕೃತಜ್ಞತೆಗಳು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com