ಕೋವಿಡ್-19 ಸೋಂಕಿಗೆ ತುತ್ತಾಗುವವರ ಪತ್ತೆಗೆ ಸಮೀಕ್ಷೆ ನಡೆಸಲು ಭಾರತೀಯ ವೈದ್ಯಕೀಯ ಮಂಡಳಿ ರಾಜ್ಯಗಳಿಗೆ ಸೂಚನೆ

ಕೊರೋನಾ ವೈರಸ್ ಸೋಂಕಿಗೆ ತುತ್ತಾಗುವ ಲಕ್ಷಣರಹಿತ ವ್ಯಕ್ತಿಗಳನ್ನು ಮೌಲ್ಯಮಾಪನ ಮಾಡಲು ಕೇಂದ್ರದ ಆರೋಗ್ಯ ಸಂಶೋಧನಾ ಸಂಸ್ಥೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸಿರೊ ಸಮೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರಗಳಿಗೆ ಸಲಹೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೊರೋನಾ ವೈರಸ್ ಸೋಂಕಿಗೆ ತುತ್ತಾಗುವ ಲಕ್ಷಣರಹಿತ ವ್ಯಕ್ತಿಗಳನ್ನು ಮೌಲ್ಯಮಾಪನ ಮಾಡಲು ಕೇಂದ್ರದ ಆರೋಗ್ಯ ಸಂಶೋಧನಾ ಸಂಸ್ಥೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಸಿರೊ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ಮಾಡಿದೆ.

ಈ ಹಿಂದೆ ಎಷ್ಟು ಮಂದಿ ಕೊರೋನಾ ಸೋಂಕಿಗೆ ತುತ್ತಾದರು ಮತ್ತು ಇಂದು ಎಷ್ಟು ಮಂದಿ ಗುಣಮುಖರಾಗಿದ್ದಾರೆ ಎಂದು ಪತ್ತೆಹಚ್ಚಲು ರಕ್ತ ಪರೀಕ್ಷೆ ಮಾಡಿಸುವ ಪ್ರಯೋಗವನ್ನು ಈ ಸಮೀಕ್ಷೆ ಒಳಗೊಂಡಿದೆ. ಅಲ್ಲದೆ ಸೋಂಕಿಗೆ ಹೆಚ್ಚು ತುತ್ತಾಗುವ ಸಾಧ್ಯತೆಯಿರುವ ಜನರನ್ನು ಸಹ ಸಮೀಕ್ಷೆಗೊಳಪಡಿಸಲಾಗುತ್ತದೆ.

ಕೊರೋನಾ ವಾರಿಯರ್ಸ್, ಆರೋಗ್ಯ ಕಾರ್ಯಕರ್ತರು, ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಿರುವವರು, ಕಂಟೈನ್ ಮೆಂಟ್ ವಲಯಗಳಲ್ಲಿ ಇರುವ ವ್ಯಕ್ತಿಗಳು, ಪೊಲೀಸ್ ಸಿಬ್ಬಂದಿಗಳನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com