ಲಡಾಕ್ ವಿವಾದ ಕುರಿತು ಚೀನಾ ಜೊತೆ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆ ನಡೆಸುತ್ತೇವೆ:ರಾಜನಾಥ್ ಸಿಂಗ್

ಲಡಾಕ್ ಗಡಿಭಾಗದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಿಯೋಜನೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಈ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ಲಡಾಕ್ ಗಡಿಭಾಗದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಿಯೋಜನೆಯಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಈ ಕುರಿತಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯರ ಮನೋಧರ್ಮ, ಗೌರವಕ್ಕೆ ಎಂದಿಗೂ ನೋವುಂಟುಮಾಡಲು ಸರ್ಕಾರ ಯಾವುದೇ ಕಾರಣಕ್ಕೂ ಸಿದ್ಧವಿಲ್ಲ. ವಿವಾದ ಬಗೆಹರಿಸಲು ಚೀನಾದೊಂದಿಗೆ ಮಿಲಿಟರಿ ಮತ್ತು ನಿಯೋಗ ಮಟ್ಟದ ಮಾತುಕತೆ ನಡೆಯುತ್ತಿದೆ ಎಂದಿದ್ದಾರೆ.

ಲಡಾಕ್ ಗಡಿ ವಿಚಾರಕ್ಕೆ ಸಂಬಂಧಪಟ್ಟಂತೆ ಕದನಕ್ಕೆ ಇತಿಶ್ರೀ ಹಾಡಲು ಭಾರತ-ಚೀನಾದ ಮಧ್ಯೆ ಮಧ್ಯೆಪ್ರವೇಶಿಸಲು ಸಿದ್ಧ ಎಂದು ಡೊನಾಲ್ಡ್ ಟ್ರಂಪ್ ಹೇಳಿರುವ ಕುರಿತು ಕೇಳಿದಾಗ, ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಎರಡೂ ದೇಶಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸುವ ವೇಳೆ ತಿಳಿಸಿದ್ದೇನೆ ಎಂದರು.

ಚೀನಾದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತದ ನಿಲುವಿನ ಬಗ್ಗೆ ಕೇಂದ್ರದ ರಕ್ಷಣಾ ಸಚಿವರಾಗಿ ಇದೇ ಮೊದಲ ಬಾರಿಗೆ ರಾಜನಾಥ್ ಸಿಂಗ್ ಹೇಳಿಕೆ ನೀಡಿದ್ದಾರೆ. ನಾನು ನಿನ್ನೆ ಅಮೆರಿಕ ರಕ್ಷಣಾ ಕಾರ್ಯದರ್ಶಿಯೊಂದಿಗೆ ಮಾತನಾಡಿದೆ. ಭಾರತ ಮತ್ತು ಚೀನಾ ನಡುವಿನ ಯಾವುದೇ ಸಮಸ್ಯೆಯನ್ನು ಮಿಲಿಟರಿ ಮತ್ತು ರಾಜತಾಂತ್ರಿಕ ಸಂವಾದದ ಮೂಲಕ ಪರಿಹರಿಸುವ ಯಾಂತ್ರಿಕ ವ್ಯವಸ್ಥೆಯನ್ನು ನಾವು ಈಗಾಗಲೇ ಹೊಂದಿದ್ದೇವೆ ಎಂದು ಅವರಿಗೆ ತಿಳಿಸಿದ್ದೇನೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com