ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕ್

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಭಾನುವಾರ ತಿಳಿದುಬಂದಿದೆ. 

ಪೂಂಚ್ ಜಿಲ್ಲೆಯ ಶಾಹ್ಪುರ್, ಕಿರ್ಣ್, ಕ್ವಾಸ್ಬಾ ಸೆಕ್ಟರ್ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ. 

ಗಡಿಯಲ್ಲಿ ಭಾರತೀಯ ಸೇನೆ ಮೇಲೆ ಪಾಕಿಸ್ತಾನ ಶೆಲ್ ಹಾಗೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com