ಕಮಲ್ ನಾಥ್ ರನ್ನು ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದುಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ: ಸುಪ್ರೀಂ ಕೋರ್ಟ್
ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
Published: 02nd November 2020 07:05 PM | Last Updated: 02nd November 2020 07:05 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಪದೇ ಪದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದನ್ನು ಉಲ್ಲೇಖಿಸಿ ಚುನಾವಣಾ ಆಯೋಗ ಕಳೆದ ಶುಕ್ರವಾರ ಕಮಲ್ ನಾಥ್ ಅವರ ಸ್ಟಾರ್ ಪ್ರಚಾರಕರ ಸ್ಥಾನಮಾನವನ್ನು ರದ್ದುಪಡಿಸಿತ್ತು.
ಕಮಲ್ ನಾಥ್ ಅವರು ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರು, ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದು ಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ನೀಡಿದವರು ಯಾರು ಎಂದು ಖಾರವಾಗಿ ಪ್ರಶ್ನಿಸಿದರು.
ಕಮಲ್ ನಾಥ್ ಅವರನ್ನು ಉಪಚುನಾವಣೆಯ ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದು ಹಾಕಲು ಚುನಾವಣಾ ಆಯೋಗಕ್ಕೆ ಅಧಿಕಾರವಿಲ್ಲ. ಆಯೋಗವೇ ಖುದ್ದಾಗಿ ಈ ನಿರ್ಧಾರ ಕೈಗೊಂಡಿತೋ ಅಥವಾ ಪಕ್ಷದ ಅಧ್ಯಕ್ಷರು ಆಯೋಗಕ್ಕೆ ಸೂಚಿಸಿದರೋ ಎಂದು ಬೊಬ್ಡೆ ಪ್ರಶ್ನಿಸಿದರು.