ಬಾಬ್ರಿ ಮಸೀದಿ ತೀರ್ಪು ನೀಡಿದ್ದ ನಿವೃತ್ತ ನ್ಯಾಯಾಧೀಶರಿಗೆ ಭದ್ರತೆ ನೀಡಲು ಸುಪ್ರೀಂ ನಕಾರ

ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರಿಗೆ ಭದ್ರತೆಯನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ಬಾಬ್ರಿ ಮಸೀದಿ ಪ್ರಕರಣದಲ್ಲಿ ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರಿಗೆ ಭದ್ರತೆಯನ್ನು ಮುಂದುವರೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪಿನಲ್ಲಿ ವಿಶೇಷ ನ್ಯಾಯಧೀಶರು, ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ 32 ಆರೋಪಿಗಳು ದೋಷ ಮುಕ್ತ ಎಂದು ಘೋಷಿಸಿದ್ದರು. 

ಈ ಬಳಿಕ ತಮಗೆ ಭದ್ರತೆಯನ್ನು ಮುಂದುವರೆಸಬೇಕೆಂದು ವಿಶೇಷ ನ್ಯಾಯಾಧೀಶ ಎಸ್ ಕೆ ಯಾದವ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್ ನಾರಿಮನ್, ನ್ಯಾ. ನವೀನ್ ಸಿನ್ಹಾ, ನ್ಯಾ.ಕೃಷ್ಣ ಮುರಾರಿ ಅವರಿದ್ದ ಪೀಠ ಭದ್ರತೆಯನ್ನು ಮುಂದುವರೆಸುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ. ಪತ್ರವನ್ನು ಪರಿಶೀಲಿಸಲಾಗಿದ್ದು, ಭದ್ರತೆಯನ್ನು ವಿಸ್ತರಿಸುವುದು ಸೂಕ್ತವಲ್ಲ ಎಂಬುದು ನ್ಯಾಯಪೀಠದ ಅಭಿಪ್ರಾಯವಾಗಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಸೆ.30 ರಂದು ಪ್ರಕಟಿಸಿದ್ದ ತೀರ್ಪಿನಲ್ಲಿ ಎಲ್ ಕೆ ಅಡ್ವಾಣಿ, ಉಮಾ ಭಾರತಿ, ಮುರಳಿಮನೋಹರ್ ಜೋಷಿ ಮುಂತಾದ 32 ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com