ಬಿಹಾರ ವಿಧಾನಸಭಾ ಚುನಾವಣೆ: ಎರಡನೇ ಹಂತದಲ್ಲಿ ಶೇ. 53.51 ರಷ್ಟು ಮತದಾನ

ಬಿಹಾರ ವಿಧಾನಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟಾರೇಯಾಗಿ ಶೇ. 53. 51 ರಷ್ಟು ಮತದಾನವಾಗಿದೆ.
ಮತದಾರರು
ಮತದಾರರು

ಪಾಟ್ನಾ: ಬಿಹಾರ ವಿಧಾನಸಭೆಯ 94 ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟಾರೇಯಾಗಿ ಶೇ. 53. 51 ರಷ್ಟು ಮತದಾನವಾಗಿದೆ. ಮುಂದಿನ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಅಂಕಿ ಅಂಶಗಳು ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಮಂಗಳವಾರ ಸಂಜೆ 5 ಗಂಟೆಯವರೆಗೂ ಶೇ 53. 79 ರಷ್ಟು ಮತದಾನವಾಗಿದೆ. 2015ರ ವಿಧಾನಸಭಾ ಚುನಾವಣೆಯಲ್ಲಿ ಈ  ಕ್ಷೇತ್ರಗಳಲ್ಲಿ ಶೇ.55.35 ರಷ್ಟು ಮತದಾನವಾಗಿತ್ತು ಎಂದು ಆಯೋಗ ಹೇಳಿದೆ.

94 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆದಿದ್ದು, ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಸೇರಿದಂತೆ  1450 ಇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ ಆರು ಗಂಟೆಯವರೆಗೂ ಮುಂದುವರೆಯಿತು. ಕೊನೆಯ ವೇಳೆಯಲ್ಲಿ ಕೋವಿಡ್-19 ಸೋಂಕಿತರು ಮತದಾನ ಮಾಡಲು ಅವಕಾಶ ಮಾಡಿಕೊಡಲಾಯಿತು. ಆದಾಗ್ಯೂ. ನಕ್ಸಲ್ ಭಾದಿತ ಪ್ರದೇಶಗಳಲ್ಲಿ ಮತದಾನ ಪ್ರಕ್ರಿಯೆ ಬಹಳ ಬೇಗನೆ ಮುಕ್ತಾಯವಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com