ಉತ್ತರ ಪ್ರದೇಶ, ಹರಿಯಾಣ ನಂತರ ಮಧ್ಯಪ್ರದೇಶದಲ್ಲೂ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ಚಿಂತನೆ

ಉತ್ತರ ಪ್ರದೇಶ, ಹರಿಯಾಣ ನಂತರ ಇದೀಗ ಮಧ್ಯಪ್ರದೇಶ ಸರ್ಕಾರ ಕೂಡಾ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೂಪಾಲ್:  ಉತ್ತರ ಪ್ರದೇಶ, ಹರಿಯಾಣ ನಂತರ ಇದೀಗ ಮಧ್ಯಪ್ರದೇಶ ಸರ್ಕಾರ ಕೂಡಾ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಲವ್ ಜಿಹಾದ್ ನಂತಹ ಪದ್ಧತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಕಾನೂನನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಮ್ ಸೋಮವಾರ ಹೇಳಿದ್ದಾರೆ.

ಇದರೊಂದಿಗೆ ಮಧ್ಯಪ್ರದೇಶ, ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಡಳಿತದ ಮೂರನೇ ರಾಜ್ಯವಾಗಿ ಹೊರಹೊಮ್ಮಿದೆ.

ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಹರಿಯಾಣ ಮುಖ್ಯಮಂತ್ರಿ ಎಂಎಲ್ ಕಟ್ಟರ್ ಕೂಡಾ ಇದೇ ರೀತಿಯ ಘೋಷಣೆ ಮಾಡಿದ್ದರು.

ಪ್ರೀತಿ ಹೆಸರಿನಲ್ಲಿ ಜಿಹಾದ್ ನಡೆಯಬಾರದು. ಇಂತಹ ಪದ್ಧತಿಯನ್ನು ತಡೆಯಲು ಕಾನೂನು ರೂಪಿಸಲಾಗುವುದು ಎಂದು ಚೌಹ್ಹಾಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com