ಕೊರೋನಾ ವೈರಸ್ ಪರೀಕ್ಷೆ
ಕೊರೋನಾ ವೈರಸ್ ಪರೀಕ್ಷೆ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 38,310 ಪ್ರಕರಣಗಳ ದಾಖಲು, ಸೋಂಕಿತರ ಸಂಖ್ಯೆ 82.6 ಲಕ್ಷ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,310 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 82.6 ಲಕ್ಷ ಗಡಿ ದಾಟಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 38,310 ಹೊಸ ಸೋಂಕು ಪ್ರಕರಣಗಳು ದಾಖಲಾಗುವುದರೊಂದಿಗೆ ಭಾರತದ ಒಟ್ಟಾರೆ ಸೋಂಕಿತರ ಸಂಖ್ಯೆ 82.6 ಲಕ್ಷ ಗಡಿ ದಾಟಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳ ಅವಧಿಲ್ಲಿ ದೇಶಾದ್ಯಂತ 38,310 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 82,67,623ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ದೇಶಾದ್ಯಂತ 490 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,23,097ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 58,323 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 76,03,121ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,41,405ಕ್ಕೆ ಕುಸಿದಿದೆ.

Related Stories

No stories found.

Advertisement

X

Advertisement

X
Kannada Prabha
www.kannadaprabha.com