ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಹೇಡಿತನದ ಉಗ್ರರ ದಾಳಿ: ಪ್ರಧಾನಿ ಮೋದಿ ತೀವ್ರ ಖಂಡನೆ

ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಕಾಬೂಲ್:  ಅಪ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಹೇಳಿದ್ದಾರೆ.

ಕಾಬೂಲ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇರಾನಿ ರಾಯಭಾರಿ ಕೂಡಾ ಪಾಲ್ಗೊಂಡಿರುವಂತೆಯೇ ಉಗ್ರರು ಗುಂಡಿನ ಮಳೆ ಗರೆದಿದ್ದಾರೆ. ಉಗ್ರರ ದಾಳಿಯಲ್ಲಿ 25 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿನ ಹೇಡಿತನದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡ ಕುಟುಂಬದವರಿಗೆ ಪ್ರಾರ್ಥಿಸುವುದಾಗಿ ಮೋದಿ ಟ್ವೀಟ್ ಮಾಡಿದ್ದಾರೆ.

ಭಯೋತ್ಪಾದನೆ ವಿರುದ್ಧದ ಅಫ್ಘಾನಿಸ್ತಾನದ ಕೆಚ್ಚೆದೆಯ ಹೋರಾಟಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com