ಮುಂದಿನ ವರ್ಷ ಜನವರಿ 31ಕ್ಕೆ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ- ಕೇಂದ್ರ ಶಿಕ್ಷಣ ಸಚಿವರು  

ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ  ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಕಾರಣದಿಂದ ಮುಂದೂಡಲ್ಪಟ್ಟಿರುವ ಕೇಂದ್ರೀಯ  ಶಿಕ್ಷಕರ ಅರ್ಹತಾ ಪರೀಕ್ಷೆ ಮುಂದಿನ ವರ್ಷ ಜನವರಿ 31ರಂದು ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ. ಈ ಹಿಂದೆ ಜುಲೈ 5 ರಂದು ಪರೀಕ್ಷೆ ನಿಗಧಿಯಾಗಿತ್ತು.

14 ನೇ ಆವೃತ್ತಿಯ ಕೇಂದ್ರೀಯ  ಶಿಕ್ಷಕರ ಅರ್ಹತಾ ಪರೀಕ್ಷೆ  ಜುಲೈನಲ್ಲಿ ದೇಶಾದ್ಯಂತ 112 ನಗರಗಳಲ್ಲಿ ನಡೆಯಬೇಕಿತ್ತು. ಆದರೆ, ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲ್ಪಟ್ಟಿದ್ದು, ಈ ಪರೀಕ್ಷೆಯನ್ನು ಇದೀಗ ಮುಂದಿನ ವರ್ಷದ  ಜನವರಿ 31 ರಂದು ನಡೆಸಲಾಗುವುದು ಎಂದು ನಿಶಾಂಕ್ ಹೇಳಿದ್ದಾರೆ.

ಸಾಮಾಜಿಕ ಅಂತರ ಮತ್ತಿತರ ಸುರಕ್ಷತಾ ಕ್ರಮಗಳೊಂದಿಗೆ 135 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಪೊಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.

ಕೋವಿಡ್-19 ಕಾರಣದಿಂದ ಪರೀಕ್ಷೆ ನಡೆಯುವ ನಗರದ ಬದಲಾವಣೆಗೆ ಅಸಂಖ್ಯಾತ ಅಭ್ಯರ್ಥಿಗಳಿಂದ ಮನವಿ ಸ್ವೀಕರಿಸಲಾಗಿದ್ದು, ಕೋವಿಡ್-19  ಕಾರಣದಿಂದಾಗಿ ಅಭ್ಯರ್ಥಿಗಳು ಎದುರಿಸುತ್ತಿರುವ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ  ಪರೀಕ್ಷೆಯಲ್ಲಿ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ   ನಗರದ  ಆಯ್ಕೆಯಲ್ಲಿ ತಿದ್ದುಪಡಿ ಮಾಡಿಕೊಳ್ಳಲು  ಒಂದು ಬಾರಿ ಅವಕಾಶ ನೀಡಲು ಸಿಬಿಎಸ್‌ಇ ನಿರ್ಧರಿಸಿದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com