ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ಮಮತಾ ಬ್ಯಾನರ್ಜಿ ತಡೆ: ಅಮಿತ್ ಶಾ
ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
Published: 05th November 2020 04:45 PM | Last Updated: 05th November 2020 04:45 PM | A+A A-

ಅಮಿತ್ ಶಾ
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ 80 ಯೋಜನೆಗಳಿಗೆ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಬಡವರು ಹಾಗೂ ಬುಡಕಟ್ಟು ಜನಾಂಗದವರಿಗೆ ಉಪಯೋಗವಾಗುವ ಕೇಂದ್ರ ಸರ್ಕಾರದ ಶೇ.80 ರಷ್ಟು ಯೋಜನೆಗಳಿಗೆ ಮಮತ ಬ್ಯಾನರ್ಜಿ ತಡೆಯೊಡ್ಡಿದ್ದಾರೆ. ಈ ರೀತಿ ಮಾಡುವುದರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ತಡೆಯುತ್ತೇವೆ ಎಂದು ಮಮತಾ ಬ್ಯಾನರ್ಜಿ ಭಾವಿಸಿದ್ದರೆ ಅದು ತಪ್ಪು ಕಲ್ಪನೆ ಎಂದು ಅಮಿತ್ ಶಾ ಮಮತಾ ಬ್ಯಾನರ್ಜಿಗೆ ಸಂದೇಶ ರವಾನೆ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ತೋರುತ್ತಿರುವ ನೀತಿ, ಮಮತಾ ಬ್ಯಾನರ್ಜಿ ಅವರ ಸರ್ಕಾರದ ಅಂತ್ಯವನ್ನು ಸೂಚಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಿ ಸರ್ಕಾರ ರಚನೆ ಮಾಡಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಬಡವರಿಗೆ ಸಿಗಬೇಕಿದ್ದ 5 ಲಕ್ಷ ರೂಪಾಯಿವರೆಗಿನ ಸೇವೆಗಳನ್ನು ಪಡೆಯುತ್ತಿಲ್ಲ.ರೈತರಿಗೆ ವರ್ಶಕ್ಕೆ 6,000 ರೂಪಾಯಿಗಳೂ ಲಭ್ಯವಾಗುತ್ತಿಲ್ಲ ಎಂದು ಶಾ ಆರೋಪಿಸಿದ್ದಾರೆ.