ಹಕ್ಕುಚ್ಯುತಿ ಪ್ರಕರಣದಲ್ಲಿ ಅರ್ನಬ್ ಗೆ ರಿಲ್ಯಾಕ್ಸ್: ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂ ನೋಟೀಸ್

ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಬರೆದ ಪತ್ರದ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಯವರಿಗೆ ನೋಟೀಸ್ ಜಾರಿ ಮಾಡಿದೆ.
ಅರ್ನಾಬ್ ಗೋಸ್ವಾಮಿ
ಅರ್ನಾಬ್ ಗೋಸ್ವಾಮಿ

ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಬರೆದ ಪತ್ರದ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಯವರಿಗೆ ನೋಟೀಸ್ ಜಾರಿ ಮಾಡಿದೆ.

ಮಹಾರಾಷ್ಟ್ರ ವಿಧಾನಸಭೆಯಿಂದ ಹಕ್ಕುಚ್ಯುತಿ ನೋಟೀಸ್ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯ ಗೋಸ್ವಾಮಿಗೆ ರಿಲೀಫ್ ಕೊಟ್ಟಿದೆ.

"ಈ ಪತ್ರ ಬರೆದವರ ಬಗ್ಗೆ ನಮಗೆ ಗಂಭೀರ ಪ್ರಶ್ನೆ ಇದೆ ಮತ್ತು ಇದನ್ನು ಕಡೆಗಣಿಸುವುದು ನಮಗೆ ಅಸಾಧ್ಯವಾಗಿದೆ. "ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಹೇಳಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ಪ್ರಕರಣದ ಮಾದ್ಯಮ ಚರ್ಚೆಗಳಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಗೋಸ್ವಾಮಿಗೆ ಮಹಾ ಸರ್ಕಾರ ನೋಟೀಸ್ ನೀಡಿತ್ತು.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಬಗ್ಗೆ ಸಿಬಿಐತನಿಖೆ ನಡೆಸುತ್ತಿದೆ.

ಬಾರ್ & ಬೆನ್ಚ್ ವರದಿಯ ಪ್ರಕಾರ, ಅಕ್ಟೋಬರ್ 13 ರಂದು ಗೋಸ್ವಾಮಿಯವರಿಗೆ ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ಈ ಪತ್ರವನ್ನು ಬರೆದಿದ್ದಾರೆ, 

ಆರ್ಟಿಕಲ್ 32 ರ ಅಡಿಯಲ್ಲಿ ನಾಗರಿಕರು ತಮ್ಮ ಹಕ್ಕುಗಳನ್ನು ಚಲಾಯಿಸುವುದನ್ನು ತಡೆಯುವ ಇಂತಹ ಪ್ರಯತ್ನಗಳು ನ್ಯಾಯಯುತ ಆಡಳಿತ ವ್ಯವಸ್ಥೆಯಲ್ಲಿ ಗಂಭೀರ ಹಸ್ತಕ್ಷೇಪಕ್ಕೆ ಕಾರಣವಾಗುತ್ತವೆ ಎಂದು ಬೊಬ್ಡೆ ಅಭಿಪ್ರಾಯಪಟ್ಟರು."ಪತ್ರದ ಉದ್ದೇಶ ಅರ್ಜಿದಾರರನ್ನು ಬೆದರಿಸುವಂತಿದೆ. ಅವರಿಗೆ ಕೋರ್ಟಿಗೆ ಹೋದರೆ ದಂಡ ಹಾಕುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಭಾರತ ಸಂವಿಧಾನದ 32 ನೇ ಪರಿಚ್ಚೇಧದ ಅಡಿಯಲ್ಲಿ ಈ ನ್ಯಾಯಾಲಯವನ್ನು ಸಂಪರ್ಕಿಸುವ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗಿದೆ"

ಅರ್ನಬ್ ಗೋಸ್ವಾಮಿ ಅವರು 2018 ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆಂಬ ಆರೋಪದ ಹಿನ್ನೆಲೆ ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಬುಧವಾರ ಅವರ ಬಂಧನದ ನಂತರ ಗೋಸ್ವಾಮಿಗೆ ಅಲಿಬಾಗ್ ಕೋರ್ಟ್ 14 ದಿನಗಳ ನ್ಯಾಯಾಂಗ ಕಸ್ಟಡಿ ವಿಧಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com