ಸೆಲ್ಫಿ ತಂದ ಆಪತ್ತು: ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಕಣಿವೆಗೆ ಬಿದ್ದು ಮಹಿಳೆ ಸಾವು

ಪಿಕ್ ನಿಕ್ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳ ಲು ಹೋದ ಮಹಿಳೆ ಕಾಲು ಜಾರಿ ಕಣಿವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ಇಂದೋರ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇಂದೋರ್: ಪಿಕ್ ನಿಕ್ ಸ್ಥಳದಲ್ಲಿ ಸೆಲ್ಫಿ ತೆಗೆದುಕೊಳ್ಳ ಲು ಹೋದ ಮಹಿಳೆ ಕಾಲು ಜಾರಿ ಕಣಿವೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ಇಂದೋರ್ ನಲ್ಲಿ ನಡೆದಿದೆ.

ನೀತು ಮಹೇಶ್ವರಿ ಮೃತ ಮಹಿಳೆ, ಇಂದೋರ್ ನಿಂದ 55 ಕಿಮೀ ದೂರದಲ್ಲಿರುವ ಜಾಮ್ ಗೇಟ್ ಪ್ರದೇಶಕ್ಕೆ ತಮ್ಮ ಕುಟುಂಬಸ್ಥರೊಂದಿಗೆ ಪಿಕ್ ನಿಕ್ ಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬೆಟ್ಟದ ಮೇಲೆ ನಿಂತು ಸೆಲ್ಪಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಕಣಿವೆಗೆ ಬಿದ್ದಿದ್ದಾರೆ. 

ನಾಲ್ಕು ಗಂಟೆಗಳ ತೀವ್ರ ಶೋಧದ ನಂತರ ಮಹಿಳೆ ಶವ ಪತ್ತೆಯಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com