ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ಅಮೆರಿಕ-ಭಾರತ ನಡುವಿನ ಸಂಬಂಧಗಳು ಮತ್ತಷ್ಟು ಸದೃಢ: ಬೈಡೆನ್ ಗೆಲುವು ಕುರಿತು ವೆಂಕಯ್ಯ ನಾಯ್ಡು ಪ್ರತಿಕ್ರಿಯೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿರುವ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಮತ್ತಷ್ಟು ಸದೃಢಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿರುವ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಮುಂದಿನ ದಿನಗಳಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಮತ್ತಷ್ಟು ಸದೃಢಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡನ್ ಮತ್ತು ಉಪಾಧ್ಯಕ್ಷರಾಗಿ ಚುನಾಯಿತರಾದ ಕಮಲಾ ಹ್ಯಾರಿಸ್ ಅವರ ಅಭೂತಪೂರ್ವ ಗೆಲುವಿಗಾಗಿ ನನ್ನ ಶುಭಾಶಯಗಳು ಮತ್ತು ಶುಭ ಹಾರೈಕೆಗಳು ಎಂದು ಉಪರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಸಮಾನ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹೊಂದಿರುವ ಎರಡೂ ರಾಷ್ಟ್ರಗಳು ಜಗತ್ತಿನಲ್ಲಿ ಶಾಂತಿ ಸ್ಥಾಪನೆ ಮತ್ತು ಸಮೃದ್ಧಿಗಾಗಿ ಶ್ರಮಿಸುತ್ತಿರುವುದರಿಂದ ಮುಂಬರುವ ವರ್ಷಗಳಲ್ಲಿ ಭಾರತ-ಅಮೆರಿಕ ನಡುವಿನ ಸಂಬಂಧಗಳು ಹೆಚ್ಚು ಸದೃಢಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

77 ವರ್ಷದ ಡೆಮಾಕ್ರಟಿಕ್ ಪಕ್ಷದ  ಬೈಡೆನ್ ಅಮೆರಿಕದ 46ನೇ ಅಧ್ಯಕ್ಷರಾಗಲಿದ್ದು, 56 ವರ್ಷದ ಕಮಲಾ ಹ್ಯಾರಿಸ್, ದೇಶದ 200 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಉಪಾಧ್ಯಕ್ಷರ ಸ್ಥಾನ ಅಲಂಕರಿಸುತ್ತಿರುವ ಮಹಿಳೆಯಾಗಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com