ಜಾಮೀನು ಕೋರಿ ಅಲಿಬಾಗ್‌ ಸೆಷನ್‌ ನ್ಯಾಯಾಲಯದ ಮೊರೆ ಹೋದ ಅರ್ನಬ್

Published: 09th November 2020 06:57 AM  |   Last Updated: 09th November 2020 11:22 PM   |  A+A-


Arnab Goswami

ಪತ್ರಕರ್ತ ಅರ್ನಬ್ ಗೋಸ್ವಾಮಿ

Posted By : Srinivas Rao BV
Source : UNI

ಮುಂಬೈ: ವ್ಯಕ್ತಿಯೋರ್ವನ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ಅಲಿಬಾಗ್ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ.

ಸೋಮವಾರ ಹೈಕೋರ್ಟ್, ಸಂವಿಧಾನದ ಪರಿಚ್ಛೇದದ 226ರ ಅಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತ್ತು. ಆದರೆ, ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಸೂಚಿಸಿತ್ತು. 

ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಎಂಬುವರಿಗೆ ಗೋಸ್ವಾಮಿ ಬಾಕಿ ಹಣ ನೀಡಿದ್ದರಿಂದ, ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಮರಣ ಪತ್ರದಲ್ಲಿ ಅರ್ನಬ್ ಅವರ ಹೆಸರು ಉಲ್ಲೇಖಿಸಿದ್ದರಿಂದ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದರು. ಸ್ಥಳೀಯ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

Stay up to date on all the latest ರಾಷ್ಟ್ರೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp