ದೀದಿಯನ್ನು ಬೆಂಬಲಿಸುವವರಿಗೆ ಬಿಜೆಪಿ ನಾಯಕನಿಂದ ಕೈಕಾಲು ಮುರಿಯುವ, ಕೊಲೆ ಮಾಡುವ ಬೆದರಿಕೆ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ. 

Published: 09th November 2020 11:37 AM  |   Last Updated: 09th November 2020 12:45 PM   |  A+A-


Bengal BJP Chief Dilip Ghosh courts controversy in an election rally

ದೀದಿಯನ್ನು ಬೆಂಬಲಿಸುವವರಿಗೆ ಬಿಜೆಪಿ ನಾಯಕನಿಂದ ಕೈಕಾಲು ಮುರಿಯುವ, ಕೊಲೆ ಮಾಡುವ ಬೆದರಿಕೆ

Posted By : Srinivas Rao BV
Source : Online Desk

ಹಲ್ದಿಯಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ. 

ದೀದಿಯನ್ನು ಬೆಂಬಲಿಸುತ್ತಿರುವ ಸಹೋದರರು ಮುಂದಿನ 6 ತಿಂಗಳಲ್ಲಿ ತಮ್ಮ ನಡೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಇಲ್ಲದೇ ಇದ್ದರೆ ಅವರಿಗೆ ಕೈ-ಕಾಲು ಕಳೆದುಕೊಳ್ಳುವ, ಪ್ರಾಣವನ್ನೂ ಕಳೆದುಕೊಳ್ಳುವ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಮಾವೇಶವೊಂದರಲ್ಲಿ ಹೇಳಿದ್ದು ವಿಡಿಯೋದಲ್ಲಿ ದಾಖಲಾಗಿರುವುದನ್ನು ಎನ್ ಡಿ ಟಿವಿ ವರದಿ ಮಾಡಿದೆ.

ಹಲ್ದಿಯಾದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ದಿಲೀಪ್ ಘೋಷ್, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅವರು "ರಾಜ್ಯದಲ್ಲಿ ಕಿರಿಕಿರಿ ಉಂಟುಮಾಡುತ್ತಿರುವ ದೀದಿಯ ಸಹೋದರರು ತಮ್ಮನ್ನು ಬದಲಾವಣೆ ಮಾಡಿಕೊಳ್ಳಲಿ ಇಲ್ಲದೇ ಇದ್ದಲ್ಲಿ ಕೈ-ಕಾಲು ಮುರಿದುಕೊಂಡು ಆಸ್ಪತ್ರೆಗೆ ಹೋಗಬೇಕಾಗುತ್ತದೆ, ಇನ್ನೂ ಹೆಚ್ಚು ಮಾಡಿದರೆ ಪ್ರಾಣಕ್ಕೇ ಕುತ್ತು ಎದುರಾಗಬಹುದು ಎಂದು ಎಚ್ಚರಿಸಿದ್ದಾರೆ.

ಪಶ್ಚಿಮ ಬಂಗಾಳಕ್ಕೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಭೇಟಿಯ ಬೆನ್ನಲ್ಲೇ ದಿಲೀಪ್ ಘೋಷ್ ಈ ಹೇಳಿಕೆ ನೀಡಿದ್ದಾರೆ. 


Stay up to date on all the latest ರಾಷ್ಟ್ರೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp