ಕೇಂದ್ರ ಸರ್ಕಾರ ನೋಟು ರದ್ದತಿ, ಜಿಎಸ್ ಟಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು: ಅಶೋಕ್ ಗೆಹ್ಲೋಟ್

ನೋಟು ರದ್ದತಿ, ಜಿಎಸ್ ಟಿ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. 
ಅಶೋಕ್ ಗೆಹ್ಲೋಟ್
ಅಶೋಕ್ ಗೆಹ್ಲೋಟ್

ಜೈಪುರ: ನೋಟು ರದ್ದತಿ, ಜಿಎಸ್ ಟಿ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. 

ಇನ್ನು ಕೊರೋನಾ ಸೋಂಕಿನಿಂದ ದೇಶದ ಅರ್ಥವ್ಯವಸ್ಥೆಯ ಮೇಲೆ ಆಗಿರುವ ಪರಿಣಾಮದ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು ಎಂದು ಗೆಹ್ಲೋಟ್ ಹೇಳಿದ್ದಾರೆ. 

ನೋಟು ರದ್ದತಿಯ ನಾಲ್ಕನೇ ವರ್ಷಾಚರಣೆಯನ್ನು ಕಾಂಗ್ರೆಸ್ ವಿಶ್ವಾಸಘಾತ ದಿವಸ ಎಂದು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಮಾತನಾಡಿದ ಗೆಹ್ಲೋಟ್ ನೋಟು ರದ್ದತಿಯ ಬಳಿಕ ದೇಶದಲ್ಲಿ ಕಪ್ಪು ಹಣದ ಸಮಸ್ಯೆ, ಭಯೋತ್ಪಾದನೆ ಸಮಸ್ಯೆ ಅಥವಾ ನಕ್ಸಲಿಸಂ ಕಡಿಮೆಯಾಗಿದೆಯೇ ಎಂದು ಪ್ರಶ್ನಿಸಿದರು. 

ನೋಟು ರದ್ಧತಿಯ ನಿರ್ಧಾರದ ನಂತರ ದೇಶದ ರೈತರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಎಸ್ ಟಿ ಜಾರಿಗೆ ಬಂದಿದ್ದರೂ ರಾಜ್ಯಗಳ ಪಾಲು ದೊರಕುತ್ತಿಲ್ಲ. ಇದು ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವಾಗಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com