ಬಿಹಾರ ಚುನಾವಣೆ ಫಲಿತಾಂಶ: ಬಿಜೆಪಿ ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಆರ್ ಜೆಡಿ!
ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ಇನ್ನು ಚುನಾವಣೆಯಲ್ಲಿ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಆರ್ ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
Published: 10th November 2020 10:10 PM | Last Updated: 10th November 2020 10:10 PM | A+A A-

ತೇಜಸ್ವಿ ಯಾದವ್-ಮೋದಿ
ಪಾಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ಇನ್ನು ಚುನಾವಣೆಯಲ್ಲಿ ಎನ್ ಡಿಎ ಮುನ್ನಡೆ ಸಾಧಿಸಿದ್ದರೂ ಆರ್ ಜೆಡಿ ಬಿಜೆಪಿಯನ್ನು ಹಿಂದಿಕ್ಕಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ.
ಬಿಹಾರ ಚುನಾವಣೆ ಫಲಿತಾಂಶದಲ್ಲಿ ಹಾವು ಏಣಿ ಆಟ ಶುರುವಾಗಿದೆ. ಒಂದು ಸುತ್ತಿನಲ್ಲಿ ಎನ್ ಡಿಎ 119 ಸ್ಥಾನಕ್ಕೀಳಿದರೆ, ಮಹಾಘಟಬಂಧನ್ 116 ಸ್ಥಾನಕ್ಕೇರಿದೆ. ನಂತರ ಎನ್ ಡಿಎ 121ಕ್ಕೇರಿದರೆ ಮಹಾಘಟಬಂಧನ್ 114ಕ್ಕೇ ಕುಸಿದಿದೆ. ಹೀಗೆ ಎರಡು ಮೈತ್ರಿ ಪಕ್ಷಗಳ ನಡುವೆ ರೋಚಕ ಹಣಾಹಣಿ ನಡೆಯುತ್ತಿದೆ.
ಇನ್ನು ಪಕ್ಷಗಳ ನಡುವಿನ ಸ್ಪರ್ಧೆಯಲ್ಲಿ ಆರ್ ಜೆಡಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೌದು ಆರ್ ಜೆಡಿ ಬರೋಬ್ಬರಿ 76 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಫಲಿತಾಂಶದ ಆರಂಭದಲ್ಲಿ 80 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದ್ದ ಬಿಜೆಪಿ ಇದೀಗ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ 43 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆಸ ಸಾಧಿಸಿ ನಾಲ್ಕನೇ ಸ್ಥಾನದಲ್ಲಿದೆ.