ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರ

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ  ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ
ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ  ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಮತ ಎಣಿಕೆ ಕಾರ್ಯದ ಆರಂಭದಲ್ಲಿ ತೇಜಸ್ವಿ ಯಾದವ್ ರ ಮಹಾಘಟ್ ಬಂಧನ್ ಮುನ್ನಡೆ ಪಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಬಿಹಾರದ ಆಡಳಿತಾರೂಢ ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹಾಲಿ ಚುನಾವಣೆಯಲ್ಲಿ ತಮ್ಮ ಪಕ್ಷದ ಸೋಲಿಗೆ ಕೋವಿಡ್ ಕಾರಣ ಎಂದು ಹೇಳಿಕೆ ನೀಡಿದ್ದಾರೆ.

'ನಾವು ಜನರ ನಿರ್ಧಾರ ಸ್ವಾಗತಿಸುತ್ತೇವೆ. ನಾವು ತೇಜಸ್ವಿ ಯಾದವ್ ಅಥವಾ ಆರ್‌ಜೆಡಿಯಿಂದ ಸೋಲಲಿಲ್ಲ. ಆದರೆ ದೇಶಕ್ಕೆ ಅಂಟಿದ ಶಾಪದಿಂದ (ಕೋವಿಡ್) ಸೋತೆವು' ಎಂದು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಅಂತೆಯೇ 'ಬಿಹಾರದಲ್ಲಿ ಕಳೆದ 70 ವರ್ಷಗಳಿಂದ ಏನೆಲ್ಲಾ  ಆಗಿತ್ತೋ ಅದಕ್ಕೆ ನಾವು ಬೆಲೆ ತೆತ್ತಿದ್ದೇವೆ. ಕೋವಿಡ್ ಕಾರಣದಿಂದ ನಾವು ಹಿನ್ನಡೆ ಅನುಭವಿಸುತ್ತಿದ್ದೇವೆ' ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ ಮತ ಎಣಿಕೆ ಆರಂಭವಾದ ಕ್ಷಣದಿಂದ ಸ್ಪಷ್ಟ ಮುನ್ನಡೆ ಸಾಧಿಸಿದ್ದ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇದೀ ಎನ್‌ಡಿಎ ಯಶಸ್ವಿಯಾಗಿ ತಿರುಗೇಟು ನೀಡುತ್ತಿದೆ. ಇತ್ತೀಚಿನ ವರದಿಗಳು ಬಂದಾಗ ಎನ್ ಡಿಎ ಮೈತ್ರಿಕೂಟ 125 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾಘಟ್ ಬಂಧನ್ 102  ಕ್ಷೇತ್ರಗಳಳ್ಲಿ ಮುನ್ನಡೆ ಸಾಧಿಸಿದೆ. ಚಿರಾಗ್ ಪಾಸ್ವಾನ್ ರ ಎಲ್ ಜೆಪಿ 7 ಕ್ಷೇತ್ರಗಳಲ್ಲಿ ಮತ್ತು ಇತರರು 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com