ಬಿಹಾರದಲ್ಲಿ 1 ಕೋಟಿಗೂ ಹೆಚ್ಚು ಮತಗಳ ಎಣಿಕೆ; ತಡರಾತ್ರಿಯವರೆಗೆ ಮುಂದುವರಿಯುವ ಸಾಧ್ಯತೆ; ಚುನಾವಣಾ ಆಯೋಗ

ಬಿಹಾರ ಚುನಾವಣೆಯ 243 ವಿಧಾನಸಭಾ ಕ್ಷೇತ್ರಗಳ ಮತೆಣಿಕೆ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದ್ದು, ತಡರಾತ್ರಿಯರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗ
ಚುನಾವಣಾ ಆಯೋಗ

ನವದೆಹಲಿ: ಬಿಹಾರ ಚುನಾವಣೆಯ 243 ವಿಧಾನಸಭಾ ಕ್ಷೇತ್ರಗಳ ಮತೆಣಿಕೆ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿದ್ದು, ತಡರಾತ್ರಿಯರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇಲ್ಲಿಯವರೆಗೆ 1 ಕೋಟಿಗೂ ಹೆಚ್ಚು ಮತಗಳ ಎಣಿಕೆ ನಡೆದಿದೆ. ಕೋವಿಡ್ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಮತ ಎಣಿಕೆ ವಿಳಂಬವಾಗುತ್ತಿದೆ ಎಂದು ಆಯೋಗ ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಪ ಚುನಾವಣಾಧಿಕಾರಿ ಚಂದ್ರಭೂಷಣ್ ಇಲ್ಲಿಯವರೆಗೆ ಯಾವುದೇ ಸಮಸ್ಯೆಯಿಲ್ಲದ ಮತೆಣಿಕೆ ನಡೆದಿದೆ ಎಂದರು. ರಾಜ್ಯದಲ್ಲಿ 55 ಸ್ಥಳಗಳಲ್ಲಿ ಚುನಾವಣೆ ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com