ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕಾರಿಗೆ ಅಪರಿಚಿತ ವಾಹನ ಡಿಕ್ಕಿ, 7 ಮಂದಿ ಸಾವು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Published: 10th November 2020 09:51 AM  |   Last Updated: 10th November 2020 12:53 PM   |  A+A-


accident in Mangaluru

ಸಾಂದರ್ಭಿಕ ಚಿತ್ರ

Posted By : Srinivasamurthy VN
Source : Online Desk

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಮುತ್ತಂಗಿ ಬಳಿಯ ಔಟರ್ ರಿಂಗ್ ರೋಡ್ ನಲ್ಲಿ ಈ ಅಪಘಾತ ಸಂಭವಿಸಿದ್ದು, ಹೈದರಾಬಾದ್​ನ ಗಚ್ಚಿಬೌಲಿಯಿಂದ‌ ಜಾರ್ಖಂಡ್ ಗೆ ಹೊರಟಿದ್ದಾಗ ಹೊರ ವಲಯದ ರಿಂಗ್ ರೋಡ ಬಳಿ‌ ಅಪಘಾತ ಸಂಭವಿಸಿದೆ. ಪಾಟಿ ಗ್ರಾಮ‌ ಸಮೀಪದಲ್ಲಿ ಕ್ಸೈಲೋ ವಾಹನಕ್ಕೆ ಅಪರಿಚಿತ  ವಾಹನ ಡಿಕ್ಕಿಯಿಂದಾಗಿ ವಾಹನದಲ್ಲಿದ್ದ 7ಜನ ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ ವಾಹನದಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಪೈಕಿ 7 ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರನ್ನು ಕಮಲೇಶ್ ಲೋಹರೆ, ಹರಿ ಲೋಹರೆ, ಪ್ರಮೋದ್, ವಿನೋರ್, ಪವನ್ ಎಂದು  ಗುರುತಿಸಲಾಗಿದೆ. ಈ ಪೈಕಿ ಇನ್ನೊಬ್ಬ ವ್ಯಕ್ತಿಯನ್ನು ಇನ್ನೂ ಗುರುತಿಸಲಾಗಿಲ್ಲ. 

ಮೃತರೆಲ್ಲರೂ ಜಾರ್ಖಂಡ್ ನ ಘೋರಖಪುರ, ರಾಂಘಡಗೆ‌ ಸೇರಿದವರೆಂದು ಗುರುತಿಸಲಾಗಿದೆ. ಮೃತರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp