ಅಯೋಧ್ಯೆ ದೀಪೋತ್ಸವ: ಕೋವಿಡ್-19 ಹಿನ್ನೆಲೆಯಲ್ಲಿ ಪ್ರದರ್ಶನ ಒಂದು ದಿನಕ್ಕೆ ಸೀಮಿತ

ರಾವಣನನ್ನು ಸೋಲಿಸಿದ ನಂತರ ಶ್ರೀರಾಮ ವಿಜಯಿಯಾಗಿ ವಾಪಸ್ ಆಗಿದ್ದರ ನೆನಪಿನಲ್ಲಿ ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ಅಯೋಧ್ಯೆ ದೀಪೋತ್ಸವ (ಸಂಗ್ರಹ ಚಿತ್ರ)
ಅಯೋಧ್ಯೆ ದೀಪೋತ್ಸವ (ಸಂಗ್ರಹ ಚಿತ್ರ)

ಅಯೋಧ್ಯೆ: ರಾವಣನನ್ನು ಸೋಲಿಸಿದ ನಂತರ ಶ್ರೀರಾಮ ವಿಜಯಿಯಾಗಿ ವಾಪಸ್ ಆಗಿದ್ದರ ನೆನಪಿನಲ್ಲಿ ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.

ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ ಎಂದು ಬುಧವಾರ ಅಧಿಕಾರಿಗಳು ಹೇಳಿದ್ದರು. ಆದರೆ ಈಗ ಕೋವಿಡ್‍ -19 ಸಾಂಕ್ರಾಮಿಕವನ್ನು ಪರಿಗಣಿಸಿ ಕೇವಲ ಒಂದು ದಿನಕ್ಕೆ ಕಾರ್ಯಕ್ರಮ ಮೊಟಕುಗೊಳಿಸಲಾಗಿದೆ.

ನವೆಂಬರ್ 13 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುಷ್ಪಕ ವಿಮಾನದ ಮೂಲಕ ಆಗಮಿಸುವ ಶ್ರೀರಾಮ, ಸೀತಾಮಾತೆ, ಲಕ್ಷ್ಮಣರನ್ನು ಸಾಂಕೇತಿಕವಾಗಿ ಸ್ವಾಗತಿಸಲಿದ್ದಾರೆ.

ಕೋವಿಡ್-19 ನಿರ್ಬಂಧಗಳಿಂದಾಗಿ ಇಂದಿನ ಮತ್ತು ನಾಳೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com