ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು
ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
Published: 11th November 2020 04:36 PM | Last Updated: 11th November 2020 05:44 PM | A+A A-

ಅರ್ನಾಬ್ ಗೋಸ್ವಾಮಿ
ನವದೆಹಲಿ: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು.
ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದರಿಂ ಮತ್ತು ಅದಕ್ಕಾಗಿ ಕೆಳನ್ಯಾಯಾಲಯಕ್ಕೆ ತೆರಳುವಂತೆ ಕೋರಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.