ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ, ಟಿಎಂಸಿ ಕೃತ್ಯ ಎಂದ ಕೇಸರಿ ಪಕ್ಷ
ಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದು, ಟಿಎಂಸಿ "ಗೂಂಡಾಗಳು" ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಕೇಸರಿ ಪಕ್ಷ ಆರೋಪಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
Published: 12th November 2020 03:26 PM | Last Updated: 12th November 2020 03:26 PM | A+A A-

ಸಾಂದರ್ಭಿಕ ಚಿತ್ರ
ಕೊಂಟೈ: ಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದು, ಟಿಎಂಸಿ "ಗೂಂಡಾಗಳು" ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಕೇಸರಿ ಪಕ್ಷ ಆರೋಪಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಬಿಜೆಪಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಡಳಿತರೂಢ ಟಿಎಂಸಿ, ಆರೋಪ ಆಧಾರರಹಿತ ಎಂದು ಹೇಳಿದೆ.
ಜಿಲ್ಲೆಯ ಇಟಾಬೆಡಿಯಾ ಪ್ರದೇಶದಲ್ಲಿ ಬುಧವಾರ ರಾತ್ರಿ ಬಿಜೆಪಿ ಕಾರ್ಯಕರ್ತ ಗೋಕುಲ್ ಜನ ಅವರ ಶವ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಂತಿ ಭಗಬನ್‌ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತ ಗೋಕುಲ್ ಜನ ಅವರನ್ನು ಟಿಎಂಸಿ ಗೂಂಡಾಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಜನ ಅವರು ರಾಜಕೀಯ ದ್ವೇಷಕ್ಕೆ ಬಲಿಯಾಗಿದ್ದಾರೆ. ಆದರೆ ಸ್ಥಳೀಯ ಪೊಲೀಸರು ಹಂತಕರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಯಂತನ್ ಬಸು ಅವರು ಆರೋಪಿಸಿದ್ದಾರೆ.