ಕೊರೋನಾ ಲಸಿಕೆ: ಪ್ರಧಾನಿ ಮೋದಿ ಬದ್ಧತೆಗೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ

ಜಾಗತಿಕ ಪಿಡುಗಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ
ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ನವದೆಹಲಿ: ಜಾಗತಿಕ ಪಿಡುಗಾಗಿರುವ ಮಾರಕ ಕೊರೋನಾ ಸಾಂಕ್ರಾಮಿಕ ಸೋಂಕಿನ ವಿರುದ್ಧದ ಭಾರತದ ಹೋರಾಟಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಈ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಅಧನೋಮ್ ಗೆಬ್ರೆಯೆಸಸ್ ಅವರು ಟ್ವೀಟ್ ಮಾಡಿದ್ದು, ಕೊರೋನಾ ಸೋಂಕಿನ ಹೋರಾಟ ಹಾಗೂ ಲಸಿಕೆ ತಯಾರಿಕೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಕುರಿತಂತೆ ಪ್ರಧಾನಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ ಬಳಿಕ, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿ ಟ್ವೀಟ್‌ ಮಾಡಿರುವ ಟೆಡ್ರೋಸ್ ಅಧನೋಮ್ ಅವರು, 'ಕೋವಿಡ್‌ ಸೋಂಕು ಜಗತ್ತಿಗೆ ಸವಾಲಾಗಿದೆ. ಪರಸ್ಪರ ಸಹಕಾರದೊಂದಿಗೆ ಮಾತ್ರ ಇದನ್ನು  ಕೊನೆಗಾಣಿಸಲು ಸಾಧ್ಯ. ಕೋವಿಡ್‌ ವಿರುದ್ಧದ ಹೋರಾಟ, ಲಸಿಕೆ ತಯಾರಿಕೆ ಹಾಗೂ ಇತರ ದೇಶಗಳಿಗೆ ಪೂರೈಕೆ ಮಾಡಲು ಭಾರತ ತನ್ನ ಲಸಿಕೆ ಉತ್ಪಾದನಾ ಸಾಮರ್ಥ್ಯ ಬಳಕೆಯ ಬಗ್ಗೆ ತೋರುತ್ತಿರುವ ಬದ್ಧತೆಗೆ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

ವೈದ್ಯ ವಿಜ್ಞಾನ ಹಾಗೂ ಔಷಧಿ ಕ್ಷೇತ್ರದಲ್ಲಿ ಪರಸ್ಪರ ಸಹಭಾಗಿತ್ವದ ಮೂಲಕ ಜ್ಞಾನ, ಸಂಶೋಧನೆಯ ವಿನಿಮಯ ಮತ್ತು ಪರಿಣಾಮಕಾರಿ ತರಬೇತಿಯೊಂದಿಗೆ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡಬೇಕಿದೆ. ಈ ಬಗ್ಗೆ ಭಾರತ ಜಾಗತಿಕಮಟ್ಟದಲ್ಲಿ ನೆರವು ನೀಡಲಿದೆ ಎಂದು  ಟ್ವೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com