ಟ್ವೀಟ್ ಡಿಲೀಟ್ ಮಾಡಲ್ಲ, ಕ್ಷಮೆಯನ್ನೂ ಕೇಳಲ್ಲ: ನ್ಯಾಯಾಂಗ ನಿಂದನೆ ಆರೋಪಕ್ಕೆ ಕುನಾಲ್ ಕಾಮ್ರಾ ಪ್ರತಿಕ್ರಿಯೆ

ಸುಪ್ರೀಂ ಕೋರ್ಟ್‌ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಮತ್ತು ಈ ಸಂಬಂಧ ಕ್ಷಮೆಯನ್ನೂ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ ಎಂದು ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಹೇಳಿದ್ದಾರೆ.
ಕುನಾಲ್ ಕಾಮ್ರಾ
ಕುನಾಲ್ ಕಾಮ್ರಾ

ನವದೆಹಲಿ: ಸುಪ್ರೀಂ ಕೋರ್ಟ್‌ ವಿರುದ್ಧದ ತಮ್ಮ ವಿವಾದಾತ್ಮಕ ಟ್ವೀಟ್‌ಗಳನ್ನು ಡಿಲೀಟ್ ಮಾಡುವುದಿಲ್ಲ ಮತ್ತು ಈ ಸಂಬಂಧ ಕ್ಷಮೆಯನ್ನೂ ಯಾಚಿಸುವುದಿಲ್ಲ, ದಂಡವನ್ನೂ ಪಾವತಿಸುವುದಿಲ್ಲ ಎಂದು ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಹೇಳಿದ್ದಾರೆ.

ಕುನಾಲ್ ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಒಪ್ಪಿಗೆ ನೀಡಿದ ಮಾರನೆ ದಿನ ಕಾಮಿಡಿಯನ್ ಈ ಪ್ರತಿಕ್ರಿಯೆ ನೀಡಿದ್ದಾರೆ.

'ನನಗೆ ನನ್ನ ಟ್ವೀಟ್‌ಗಳನ್ನು ಹಿಂಪಡೆಯುವ ಉದ್ದೇಶವಿಲ್ಲ. ಅವು ತಮ್ಮಷ್ಟಕ್ಕೆ ಏನು ಹೇಳಬೇಕೋ ಅದನ್ನು ಹೇಳುತ್ತವೆ. ವಕೀಲರು ಇಲ್ಲ, ಕ್ಷಮಾಪಣೆ ಇಲ್ಲ, ದಂಡ ಕಟ್ಟಲ್ಲ, ಜಾಗ ಹಾಳು ಮಾಡಲ್ಲ' ಎಂದು ಕಾಮ್ರಾ ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ.

ರಿಪಬ್ಲಿಕ್ ಟಿವಿ ಸಂಪಾದಕ ಆರ್ನಬ್ ಗೋಸ್ವಾಮಿ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶವನ್ನು ಟೀಕಿಸಿ ಕಾಮ್ರಾ ಟ್ವೀಟ್‌ ಮಾಡಿದ್ದರು. 'ತಮಾಷೆಯ ಗೆರೆಯನ್ನು ಕಾಮ್ರಾ ದಾಟಿದ್ದಾರೆ' ಎಂದು ಹೇಳಿದ್ದ ಅಟಾರ್ನಿ ಜನರಲ್ ವೇಣುಗೋಪಾಲ್, ಕಾಮ್ರಾ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅವಕಾಶ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com