ಬಿಜೆಪಿ ಆಡಳಿತದಲ್ಲಿ ಪತ್ರಿಕೋದ್ಯಮದ ಕತ್ತು ಹಿಸುಕಲಾಗುತ್ತಿದೆ: ರಾಹುಲ್‌ ಗಾಂಧಿ

ಅಸ್ಸಾಂನಲ್ಲಿ ಪತ್ರಕರ್ತ ಪರಾಗ್‌ ಭುಯಾನ್‌ ಹತ್ಯೆಗೆ ಸಂಬಂಧಿಸದಿಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಸದೆ ಬಡಿಯಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಅಸ್ಸಾಂನಲ್ಲಿ ಪತ್ರಕರ್ತ ಪರಾಗ್‌ ಭುಯಾನ್‌ ಹತ್ಯೆಗೆ ಸಂಬಂಧಿಸದಿಂತೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಬಯಲಿಗೆಳೆಯುವ ಪತ್ರಕರ್ತರನ್ನು ಸದೆ ಬಡಿಯಲಾಗುತ್ತಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಇಂದು ಈ ಬಗ್ಗೆ  ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, "ಬಿಜೆಪಿ ನಾಯಕರ ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತರನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಕ್ಕೆ ತನ್ನ ಸಂತಾಪಗಳು. ಇದು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶವಿರಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ" ಎಂದಿದ್ದಾರೆ.

ಎರಡು ದಿನಗಳ ಹಿಂದೆ ಕೂಡ ಈ ವಿಷಯ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಪತ್ರಕರ್ತ ವಿನಯ್‌ ತಿವಾರಿ ವಿರುದ್ಧ ಬಿಜೆಪಿ ಗೂಂಡಾಗಳು ತೀವ್ರ ಹಲ್ಲೆ ನಡೆಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹಕ್ಕುಗಳು ಕೇವಲ ಆಯ್ದ ವ್ಯಕ್ತಿಗಳಿಗೆ ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆಯಷ್ಟೇ ಅಸ್ಸಾಂ ಪತ್ರಕರ್ತ ಪರಾಗ್ ಭುಯಾನ್ ಅವರು ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿದ್ದು, ಇದು ಕೊಲೆ ಎಂದು ಆರೋಪಿಸಲಾಗುತ್ತಿದೆ. ಈ ಅಸ್ಸಾಂ ಸರ್ಕಾರ ತನಿಖೆಗೆ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com