ಕುಖ್ಯಾತ ಗ್ಯಾಂಗ್‌ಸ್ಟರ್ ವಿಕಾಸ್ ದುಬೆ ಎನ್'ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಅಮಾನತು

ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. 
ವಿಕಾಸ್ ದುಬೆ
ವಿಕಾಸ್ ದುಬೆ

ಕಾನ್ಪುರ: ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. 

ಜುಲೈ 3 ರಂದು ಕಾನ್ಪುರದ ಚೌಬೆಪುರ್ ಪ್ರದೇಶದ ಬಿಕ್ರು ಗ್ರಾಮದಲ್ಲಿ ಗ್ಯಾಂಗ್‌ಸ್ಟರ್‌ ದುಬೆ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರ ಪೈಕಿ ಎಂಟು ಮಂದಿ ಹತರಾಗಿದ್ದರು. ಜುಲೈ 10 ರಂದು ನಡೆದ ಎನ್‌ಕೌಂಟರ್‌ನಲ್ಲಿ ದುಬೆ ಹತನಾದ.

 ಈ ಪ್ರಕರಣದಲ್ಲಿ ಕೆಲವು ಪೊಲೀಸ್ ಅಧಿಕಾರಿಗಳು ದುಬೆಗೆ ನೆರವಾಗಿದ್ದರು ಎಂಬ ಶಂಕೆ ವ್ಯಕ್ತವಾಗಿತ್ತು. ಈ ಸಂಬಂಧ ಎಸ್‌ಐಟಿ ತಂಡ ತನಿಖೆ ಆರಂಭಿಸಿತ್ತು. ಅಲ್ಲದೆ, ನವೆಂಬರ್ 5 ರಂದು ಉತ್ತರಪ್ರದೇಶ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. 

ವರದಿಯಲ್ಲಿ ಐಪಿಎಸ್ ಅಧಿಕಾರಿಯೊಬ್ಬರ ಹೆಸರನ್ನು ದಾಖಲಿಸಿದ್ದ ಎಸ್ಐಟಿ ಗ್ಯಾಂಗ್'ಸ್ಟರ್'ಗೆ ನೆರವು ನೀಡಿರುವುದಾಗಿ ತಿಳಿಸಿತ್ತು. ಇದರಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರಪ್ರದೇಶ ಸರ್ಕಾರವು ಅಧಿಕಾರಿಯನ್ನು ಅಮಾನತುಗೊಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com