ಯುಪಿ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಪ್ಪನೊಂದಿಗೆ ಮೈತ್ರಿ ಸುಳಿವು ನೀಡಿದ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಚಿಕ್ಕಪ್ಪನ ಪ್ರಗತಿಶೀಲ್ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವು ಸುಳಿವು ನೀಡಿದ್ದಾರೆ.
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಚಿಕ್ಕಪ್ಪನ ಪ್ರಗತಿಶೀಲ್ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವು ಸುಳಿವು ನೀಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಿದರೆ ತಮ್ಮ ಚಿಕ್ಕಪ್ಪ ಶಿವಪಾಲ್ ಯಾದವ್ ಅವರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಆದಾಗ್ಯೂ, ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಿಎಸ್ ಪಿ ಜತೆ ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಸ್ಪಷ್ಟಪಡಿಸಿದ್ದಾರೆ.

"ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು. ಆದರೆ ದೊಡ್ಡ ಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಅಖಿಲೇಶ್ ಯಾದವ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿವಪಾಲ್ ಯಾದವ್ ಅವರ ಪ್ರಗತಿಶೀಲ್ ಸಮಾಜವಾದಿ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುತ್ತೀರಾ? ವರದಿಗಾರರ ಪ್ರಶ್ನೆಗೆ, "ನಾವು ಆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಜಸ್ವಂತ್‌ನಗರ ಅವರ (ಶಿವಪಾಲ್ ಯಾದವ್ ಅವರ) ಸ್ಥಾನವಾಗಿದ್ದು, ಸಮಾಜವಾದಿ ಪಕ್ಷ ಆ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com