ರಾಜಕೀಯ ಹಿತಾಸಕ್ತಿ ಮೀರಿ ಮಾತುಕತೆಗೆ ಮುಂದಾಗಿ: ಭಾರತ, ಪಾಕ್ ಗೆ ಮುಫ್ತಿ ಸಲಹೆ

ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ)ಲ್ಲಿ ಎರಡೂ ಕಡೆಯ ಸೈನಿಕರ ಹಾನಿ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು...
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ

ಶ್ರೀನಗರ: ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ)ಲ್ಲಿ ಎರಡೂ ಕಡೆಯ ಸೈನಿಕರ ಹಾನಿ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ಭಾರತ ಮತ್ತು ಪಾಕಿಸ್ತಾನ ತಮ್ಮ ರಾಜಕೀಯ ಹಿತಾಸಕ್ತಿಯನ್ನು ಮೀರಿ ಮಾತುಕತೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ. 

ಪಾಕಿಸ್ತಾನ ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತ 11 ಪಾಕ್ ಸೈನಿಕರನ್ನು ಹತ್ಯೆ ಮಾಡಿದ. ಉಭಯ ದೇಶಗಳ ಗುಂಡಿನ ದಾಳಿಯಲ್ಲಿ ಐವರು ಭಾರತೀಯ ಯೋಧರು ಸಹ ಹುತಾತ್ಮರಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮುಫ್ತಿ ಅವರು, ಮಾಜಿ ಪ್ರಧಾನಿ ಎ ಬಿ ವಾಜಪೇಯಿ ಮತ್ತು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ಒಪ್ಪಿ, ಜಾರಿಗೆ ತಂದ ಕದನ ವಿರಾಮವನ್ನು ಪುನಃಸ್ಥಾಪಿಸಬೇಕು ಎಂದು ಹೇಳಿದ್ದಾರೆ.

"ಗಡಿ ನಿಯಂತ್ರಣ ರೇಖೆಯ ಎರಡೂ ಬದಿಗಳಲ್ಲಿ ಸಾವುನೋವುಗಳು ಹೆಚ್ಚುತ್ತಿರುವುದು ಬೇಸರ ತಂದಿದೆ. ಭಾರತ ಮತ್ತು ಪಾಕಿಸ್ತಾನದ ನಾಯಕತ್ವ ತಮ್ಮ ರಾಜಕೀಯ ಹಿತಾಸಕ್ತಿ ಮೀರಿ ಮಾತುಕತೆಗೆ ಮುಂದಾಗಬೇಕು ಎಂದು ಮುಫ್ತಿ ಉಭಯ ದೇಶಗಳ ನಾಯಕರನ್ನು ಕೇಳಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com