ದೇಶಾದ್ಯಂತ ಒಂದೇ ದಿನ 44,684 ಕೊರೋನಾ ಕೇಸ್ ಪತ್ತೆ: ಸತತ 4ನೇ ದಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆ

ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,684 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 44,684 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 87,73,479ಕ್ಕೆ ಏರಿಕೆಯಾಗಿದೆ. 

ಇನ್ನು ಒಂದೇ ದಿನ 520 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,29,188ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸತತ 4 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,838 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. 

ಇನ್ನು ಗಮನಾರ್ಹ ವಿಚಾರವೆಂದರೆ ಒಂದೇ ದಿನ 47,992 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಗುಣಮುಖರಾದವರ ಸಂಖ್ಯೆ 81,63,572ಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,80,719ಕ್ಕೆ ಇಳಿಕೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ದೇಶದಲ್ಲಿ ಸಕ್ರಿಯ ಪ್ರಕರಣಗಳು 5 ಲಕ್ಷಕ್ಕಿಂತಲೂ ಕಡಿಮೆ ದಾಖಲಾಗುತ್ತಿದ್ದು, ಈ ಬೆಳವಣಿಗೆಯು ದೇಶದಲ್ಲಿ ಕೊರೋನಾ ಅಬ್ಬರವನ್ನು ಕಡಿಮೆ ಮಾಡುತ್ತಿದೆ ಎಂಬುದನ್ನು ಸೂಚಿಸುತ್ತಿದೆಎಂದು ಹೇಳಲಾಗುತ್ತಿದೆ. 

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,29,491 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,40,31,230 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com