ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಗೆ ಕೊರೋನಾ ದೃಢ 

ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತಾವು ಕೋವಿಡ್ -19 ಧನಾತ್ಮಕ ವರದಿ ಪಡೆದಿರುವುದಾಗಿ ಸಿಂಗ್ ಭಾನುವಾರ ಹೇಳಿದ್ದಾರೆ.
ಎನ್ ಬಿರೇನ್ ಸಿಂಗ್
ಎನ್ ಬಿರೇನ್ ಸಿಂಗ್

ಇಂಪಾಲ್: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ತಾವು ಕೋವಿಡ್ -19 ಧನಾತ್ಮಕ ವರದಿ ಪಡೆದಿರುವುದಾಗಿ ಸಿಂಗ್ ಭಾನುವಾರ ಹೇಳಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ತಮ್ಮೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ಮುಖ್ಯಮಂತ್ರಿ ವಿನಂತಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಮುಖ್ಯಮಂತ್ರಿ, "ಸ್ನೇಹಿತರೇ, ಕೊರೋನಾ ರೋಗಲಕ್ಷಣಗಳನ್ನು ಕಂಡುಕೊಂಡ ನಂತರ ನಾನಿಂದು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದೇನೆ.  ಆದರೆ ನಾನೀಗ ಆರಾಮವಿದ್ದೇನೆ" ಎಂದು ಹೇಳಿದ್ದಾರೆ.

ಮಣಿಪುರ ಸಿಎಂ ಹೋಂ ಐಸೋಲೇಷನ್ ಗೆ ಒಳಗಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com