ಪತ್ರಿಕಾ ಸ್ವಾತಂತ್ರ್ಯಎತ್ತಿಹಿಡಿಯಲು ಸರ್ಕಾರ ಬದ್ಧ- ಪ್ರಧಾನಿ ಮೋದಿ

ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಾಧ್ಯಮ ವೃತ್ತಿಪರರ ಪಾತ್ರವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ಎಂವೆಂಕಯ್ಯ ನಾಯ್ಡು, ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಾಧ್ಯಮ ವೃತ್ತಿಪರರ ಪಾತ್ರವನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ಎಂವೆಂಕಯ್ಯ ನಾಯ್ಡು, ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಸಂದೇಶದಲ್ಲಿ ಪ್ರಧಾನಿ ಮೋದಿ, ಮುಕ್ತ ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಎಲ್ಲಾ ರೀತಿಯಲ್ಲೂ ಪತ್ರಿಕಾ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಸರ್ಕಾರ ಸಂಪೂರ್ಣವಾಗಿ ಬದ್ಧರಾಗಿದೆ. 125 ಕೋಟಿ ಭಾರತೀಯರ ಕೌಶಲ್ಯ, ಸಾಮರ್ಥ್ಯ ಮತ್ತು ಸೃಜನಶೀಲತೆಯನ್ನು ಬಿಂಬಿಸಲು ಮಾಧ್ಯಮಗಳ ಸ್ಥಳಾವಕಾಶ ಬಳಕೆಯಾಗುವಂತಾಗಲಿ ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಹಾಗೂ ನಾಗರಿಕರಿಗೆ ಮಾಹಿತಿ ನೀಡುವ ಮತ್ತು ಸಬಲೀಕರಣಗೊಳಿಸುವಲ್ಲಿ ಮಾಧ್ಯಮವು ಪ್ರಮುಖ ಪಾತ್ರ ವಹಿಸುತ್ತದೆ. ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ನಿರಂತರವಾಗಿ ಮಾಹಿತಿ ನೀಡುತ್ತಿರುವುದಕ್ಕಾಗಿ ಮಾಧ್ಯಮಗಳನ್ನು ಶ್ಲಾಘಿಸುತ್ತೇನೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಸ್ವತಂತ್ರ ಮತ್ತು ಜವಾಬ್ದಾರಿಯುತ ಪತ್ರಿಕೋದ್ಯಮಕ್ಕಾಗಿ ಸಂಸತ್ತಿನ ಕಾಯಿದೆಯ ಮೂಲಕ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವನ್ನು ಇದೇ ದಿನ ಸ್ಥಾಪಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com