ತಮಿಳುನಾಡಿನಲ್ಲಿ ಇಂದು 1,721 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆ, ಚೆನ್ನೈನಲ್ಲಿ 500ಕ್ಕಿಂತ ಕಡಿಮೆ ಪ್ರಕರಣಗಳು ದಾಖಲು

ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿದ್ದ ತಮಿಳುನಾಡಿನಲ್ಲಿ ಕ್ರಮೇಣ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಇಂದು 1,721 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಕೊರೋನಾ ವೈರಸ್ ಪರೀಕ್ಷೆ
ಕೊರೋನಾ ವೈರಸ್ ಪರೀಕ್ಷೆ

ಚೆನ್ನೈ: ಮಾರಕ ಕೊರೋನಾ ವೈರಸ್ ದಾಳಿಗೆ ತುತ್ತಾಗಿದ್ದ ತಮಿಳುನಾಡಿನಲ್ಲಿ ಕ್ರಮೇಣ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದ್ದು, ಇಂದು 1,721 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಈ ಬಗ್ಗೆ ತಮಿಳುನಾಡು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಇಂದು ತಮಿಳುನಾಡಿನಾದ್ಯಂತ 1,721 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ರಾಜಧಾನಿ ಚೆನ್ನೈನಲ್ಲಿ ಹೊಸ ಸೋಂಕಿತರ ಸಂಖ್ಯೆ 500ಕ್ಕಿಂತ ಕಡಿಮೆ ಅಂದರೆ 497 ಪ್ರಕರಣಗಳು ದಾಖಲಾಗಿವೆ. ಆ ಮೂಲಕ  ತಮಿಳುನಾಡಿನ ಒಟ್ಟಾರೆ ಸೋಂಕಿತರ ಸಂಖ್ಯೆ 7,59,916ಕ್ಕೆ ಏರಿಕೆಯಾಗಿದ್ದು, ಇಂದು 17 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೊರೋನಾ ಸೋಂಕಿಗೆ ತಮಿಳುನಾಡಿನಲ್ಲಿ ಬಲಿಯಾದವರ ಸಂಖ್ಯೆ 11,495ಕ್ಕೆ ಏರಿಕೆಯಾಗಿದೆ.

ಇನ್ನು ಇಂದು ತಮಿಳುನಾಡಿನಲ್ಲಿ 2,384 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ ಗುಣಮುಖರಾದವರ ಸಂಖ್ಯೆ 7,32,656ಕ್ಕೆ ಏರಿಕೆಯಾಗಿದೆ. ಪ್ರಸ್ತುತ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16 ಸಾವಿರಕ್ಕಿಂತ ಕಡಿಮೆ ಎಂದರೆ 15,765ಕ್ಕೆ ಕುಸಿದಿದೆ.

ಅಂತೆಯೇ ಇಂದು ತಮಿಳುನಾಡಿನಲ್ಲಿ 63,777 ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com