ಹರ್ಯಾಣ ರಾಜ್ಯಪಾಲರಿಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು

ಹರ್ಯಾಣ ರಾಜ್ಯಪಾಲ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Published: 16th November 2020 10:22 PM  |   Last Updated: 16th November 2020 10:22 PM   |  A+A-


Haryana Governor

ಹರ್ಯಾಣ ರಾಜ್ಯಪಾಲರಿಗೆ ಕೊರೋನಾ

Posted By : Srinivasamurthy VN
Source : PTI

ಚಂಡೀಘಡ: ಹರ್ಯಾಣ ರಾಜ್ಯಪಾಲ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

81 ವರ್ಷ ವಯಸ್ಸಿನ ಸತ್ಯದೇವ ನರೈನ್ ಆರ್ಯ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಅವರನ್ನು ಪಂಜಾಬ್ ನ ಮೊಹಾಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸತ್ಯದೇವ ನರೈನ್ ಆರ್ಯ ಅವರನ್ನು ಮುಂಜಾಗ್ರತಾ ಕ್ರಮವಾಗಿ ತೀವ್ರನಿಗಾ ಘಟಕದಲ್ಲಿಟ್ಟು  ಚಿಕಿತ್ಸೆ ನೀಡಲಾಗುತ್ತಿದೆ.  

ಈ ಬಗ್ಗೆ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ. 

ಇನ್ನು ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿ ಶುಭ ಕೋರಿದ್ದಾರೆ.

ಇದಕ್ಕೂ ಮೊದಲು ಸಿಎಂ ಖಟ್ಟರ್, ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಸೇರಿದಂತೆ ಅವರ ಸಂಪುಟದ ಹಲವು ಮಂತ್ರಿಗಳು ಸಹೋದ್ಯೋಗಿಗಳು, ಹರಿಯಾಣ ವಿಧಾನಸಭೆ ಸ್ಪೀಕರ್ ಜಿಯಾನ್ ಚಂದ್ ಗುಪ್ತಾ ಅವರು ಸೋಂಕಿಗೆ ತುತ್ತಾಗಿದ್ದರು ಮತ್ತು ನಂತರ ಅದರಿಂದ ಚೇತರಿಸಿಕೊಂಡಿದ್ದರು.

Stay up to date on all the latest ರಾಷ್ಟ್ರೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp