ಮಣಿಪುರ ಸಿಎಂ ಬೀರೇನ್ ಸಿಂಗ್‌ಗೆ ಕೊರೋನ ಸೋಂಕು; ಹೋಮ್ ಕ್ವಾರಂಟೈನ್ ಆಗಿ ಚಿಕಿತ್ಸೆ

ಮಣಿಪುರ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎನ್ ಬೀರೇನ್ ಸಿಂಗ್‌ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಎನ್ ಬಿರೇನ್ ಸಿಂಗ್
ಎನ್ ಬಿರೇನ್ ಸಿಂಗ್

ಇಂಫಾಲ: ಮಣಿಪುರ ಮುಖ್ಯಮಂತ್ರಿ, ಹಿರಿಯ ಬಿಜೆಪಿ ಮುಖಂಡ ಎನ್ ಬೀರೇನ್ ಸಿಂಗ್‌ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವಲ ಬೀರೇನ್ ಸಿಂಗ್, ಕೊರೋನ ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದ್ದು ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ. ಪ್ರಸ್ತುತ ನಾನು ಆರೋಗ್ಯವಾಗಿದ್ದೇನೆ. ತನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಕಡ್ಡಾಯವಾಗಿ ಕೊರೋನ ಸೋಂಕು ಪರೀಕ್ಷೆಗೆ  ಒಳಗಾಗಬೇಕು ಎಂದು ಸಲಹೆ ನೀಡಿದ್ದಾರೆ. 

ಇನ್ನು ಮಣಿಪುರ ರಾಜ್ಯದಲ್ಲಿ ಇದುವರೆಗೆ 21,636 ಸೋಂಕು ಪ್ರಕರಣ ಪತ್ತೆಯಾಗಿದ್ದು ಇದರಲ್ಲಿ 3068 ಸಕ್ರಿಯ ಪ್ರಕರಣಗಳಾಗಿವೆ ಎಂದು ರಾಜ್ಯದ ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com