ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನ ಪ್ರಶ್ನಿಸಿ ಅರ್ಜಿ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೊರ್ಟ್ ನೊಟೀಸ್

ಹತ್ರಾಸ್ ಗೆ ತೆರಳುತ್ತಿದ್ದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರತಿಕ್ರಿಯೆ ಕೇಳಿ ನೊಟೀಸ್ ಜಾರಿ ಮಾಡಿದೆ. 
ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನ
ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನ

ನವದೆಹಲಿ: ಹತ್ರಾಸ್ ಗೆ ತೆರಳುತ್ತಿದ್ದ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರತಿಕ್ರಿಯೆ ಕೇಳಿ ನೊಟೀಸ್ ಜಾರಿ ಮಾಡಿದೆ. 

ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿತ್ತು. 

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬಾಬ್ಡೆ ಹಾಗೂ ಎಎಸ್ ಬೋಪಣ್ಣ ಹಾಗೂ ವಿ ರಾಮಸುಬ್ರಹ್ಮಣಿಯಮ್ ಅವರಿದ್ದ ನ್ಯಾಯಪೀಠ, ಕೇರಳ ಕಾರ್ಯನಿರತ ಪತ್ರಕರ್ತರ ಒಕ್ಕೂಟವನ್ನು ಅಲ್ಲಾಹಾಬಾದ್ ಹೈಕೋರ್ಟ್ ಗೆ ಹೋಗದೇ ಸುಪ್ರೀಂ ಕೋರ್ಟ್ ಗೆ ಬಂದಿರುವುದು ಏಕೆ ಎಂದು ಪ್ರಶ್ನಿಸಿದೆ. 

"ನಾವು ನೊಟೀಸ್ ಜಾರಿಗೊಳಿಸುತ್ತಿದ್ದೇವೆ ಎಂದು ಅಡ್ವೊಕೇಟ್ ಕಪಿಲ್ ಸಿಬಲ್ ಹೇಳಿದ್ದಾರೆ. "ಎಫ್ಐಆರ್ ನಲ್ಲಿ ಪತ್ರಕರ್ತನ ಹೆಸರು ಇಲ್ಲ, ಯಾವುದೇ ಅಪರಾಧಗಳ ಆರೋಪಗಳಿಲ್ಲ, ಆದರೂ ಅ.05 ರ ವರೆಗೆ ಜೈಲಿನಲ್ಲಿದ್ದಾರೆ. ಪತ್ರಕರ್ತ ಸಿದ್ದಿಕ್ ಕಪ್ಪನ್ ಹತ್ರಾಸ್ ಗೆ ತೆರಳುತ್ತಿದ್ದಾಗ ಅ.5 ರಂದು ಅವರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com