ಚೆನ್ನೈ: ವಾಸನ್ ಐ ಕೇರ್ ಸ್ಥಾಪಕ ಎಎಂ ಅರುಣ್ ಅನುಮಾನಾಸ್ಪದ ಸಾವು, ಪ್ರಕರಣ ದಾಖಲು

ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆಗಳಲ್ಲೊಂದಾದ ವಾಸನ್​ ಐ ಕೇರ್ ಸಂಸ್ಥಾಪಕ ಎಎಂ ಅರುಣ್ ಅವರು ಚೆನ್ನೈನಲ್ಲಿ ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published: 16th November 2020 11:25 PM  |   Last Updated: 16th November 2020 11:25 PM   |  A+A-


Vasan Eye Care

ವಾಸನ್ ಐ ಕೇರ್ ಸಂಸ್ಥಾಪಕ ಎಎಂ ಅರುಣ್

Posted By : Srinivasamurthy VN
Source : The New Indian Express

ಚೆನ್ನೈ: ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆಗಳಲ್ಲೊಂದಾದ ವಾಸನ್​ ಐ ಕೇರ್ ಸಂಸ್ಥಾಪಕ ಎಎಂ ಅರುಣ್ ಅವರು ಚೆನ್ನೈನಲ್ಲಿ ಅನುಮಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸನ್​ ಐ ಕೇರ್​ ಸ್ಥಾಪಕ ಎಎಂ ಅರುಣ್​ ಅವರು ಇಂದು ನಿಧನ ಹೊಂದಿದ್ದು, ಅವರಿಗೆ 52 ವರ್ಷ ವಯಸ್ಸಾಗಿತ್ತು. ಚೆನ್ನೈನ ಕಾವೇರಿ ಆಸ್ಪತ್ರೆಗೆ ಅರುಣ್ ಅವರನ್ನು ಕರೆ ತರುವ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ ಆತ್ಮಹತ್ಯೆ ಎಂದು ತಿಳಿದು ಬಂದಿದ್ದರೆ,  ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ, ಈ ಬಗ್ಗೆ ಇನ್ನೂವರೆಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಯಾರು ಈ ಅರುಣ್?
ತಮಿಳುನಾಡಿನ ತಿರುಚ್ಚಿಯಲ್ಲಿ ಕುಟುಂಬ ನಡೆಸಿಕೊಂಡು ಹೋಗುತ್ತಿದ್ದ ಔಷಧಾಲಯ ಉದ್ಯಮವನ್ನು 1991ರಲ್ಲಿ ಅರುಣ್​ ಕೈಗೆತ್ತಿಕೊಂಡರು. ವಾಸನ್​ ಮೆಡಿಕಲ್​ ಹಾಲ್​ ಎಂಬುದು ಇದರ ಹೆಸರಾಗಿತ್ತು. 2002ರಲ್ಲಿ ತಿರುಚ್ಚಿಯಲ್ಲಿ ವಾಸನ್​ ಐ ಕೇರ್​ ಹೆಸರಿನ ಕಣ್ಣಿನ ಆಸ್ಪತ್ರೆಯನ್ನು ಅರುಣ್​ ಆರಂಭಿಸಿ​ದರು. ಇದು  ಅವರು ಸ್ಥಾಪಿಸಿದ ಮೊದಲ ಕಣ್ಣಿನ ಆಸ್ಪತ್ರೆ. ನಂತರ ವರುಣ್​ ದಕ್ಷಿಣ ಭಾರತದಲ್ಲಿ 100ಕ್ಕೂ ಅಧಿಕ ಕಡೆಗಳಲ್ಲಿ ಕಣ್ಣಿನ ಆಸ್ಪತ್ರೆಯನ್ನು ಆರಂಭಿಸಿದರು.  

ವಿವಾದ
2015ರಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕಾರ್ತಿ ಭಾಗಿಯಾಗಿದ್ದ ಅಕ್ರಮ ಹಣ ವಹಿವಾಟಿನ ಪ್ರಕರಣದಲ್ಲಿ ವಾಸನ್​ ಐ ಕೇಸ್​ ಹೆಸರು ಸೇರಿಕೊಂಡಿತ್ತು. ಕಾರ್ತಿ ಕಪ್ಪು ಹಣವನ್ನು ಬಿಳಿ ಮಾಡಲು ಈ ಸಂಸ್ಥೆಯನ್ನು ಬಳಕೆ ಮಾಡಿಕೊಂಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ  ಅನೇಕ ವಾಸನ್​ ಐ ಕೇರ್​ ಮೇಲೆ ತೆರಿಗೆ ಇಲಾಖೆ ಹಾಗೂ ಜಾರಿನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದರು. 2014-15ರಲ್ಲಿ ಇನ್​ಕಮ್​ ಟ್ಯಾಕ್ಸ್​ ರಿಟರ್ನ್​​ ತುಂಬಿಲ್ಲ ಎನ್ನುವ ಕಾರಣಕ್ಕೆ ಅರುಣ್​ ಹಾಗೂ ಅವರ ಪತ್ನಿ ಮೀರಾ ವಿರುದ್ಧ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಜಾಮೀನು ರಹಿತ ವಾರಂಟ್​  ಹೊರಡಿಸಿತ್ತು. 600ಕ್ಕೂ ಅಧಿಕ ನೇತ್ರ ತಜ್ಞರು, 6,000ಕ್ಕೂ ಅಧಿಕ ಸಿಬ್ಬಂದಿ ಹೊಂದಿರುವ ಸಂಸ್ಥೆಯ ಭವಿಷ್ಯವೂ ತೂಗುಯ್ಯಾಲೆ ಸ್ಥಿತಿಯಲ್ಲಿದೆ. ಆರಂಭದಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಂಸ್ಥೆಯಾಗಿದ್ದ ವಾಸನ್​ ಐ ಕೇರ್​ ಈಗ ಬಿಡ್ಡರ್​ಗಾಗಿ ಹುಡುಕಾಟ ನಡೆಸುತ್ತಿದೆ.
 

Stay up to date on all the latest ರಾಷ್ಟ್ರೀಯ news
Poll
Mamata1

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷಕ್ಕೆ ಗೆಲುವು: ಮಮತಾ ಬ್ಯಾನರ್ಜಿ ಈಗ ಭಾರತದ ಪ್ರಬಲ ಪ್ರತಿಪಕ್ಷ ನಾಯಕಿಯೇ?


Result
ಹೌದು, ನಿರ್ವಿವಾದವಾಗಿ.
ಇಲ್ಲ, ಪ್ರಾದೇಶಿಕ ನಾಯಕಿ ಅಷ್ಟೇ.
flipboard facebook twitter whatsapp