ದೆಹಲಿ: 24 ಗಂಟೆಗಳಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲು

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 
ಕೊರೋನಾ ವೈರಸ್
ಕೊರೋನಾ ವೈರಸ್

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೆಹಲಿಯಲ್ಲಿ 3,797 ಹೊಸ ಸೋಂಕು ಪ್ರಕರಣ ದಾಖಲಾಗಿವೆ. 

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 3,797 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 4,89,202ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಒಂದೇ ದಿನ ದೆಹಲಿಯಲ್ಲಿ 99 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ  ಸೋಂಕಿಗೆ ಬಲಿಯಾದವರ ಸಂಖ್ಯೆ 7,713ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ 3,560 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೆಹಲಿಯಲ್ಲಿ ಸೋಂಕಿನಿಂದ ಗುಣಮುಖರಾದ ಸೋಂಕಿತರ ಸಂಖ್ಯೆ 4,41,361ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪ್ರಸ್ತುತ ಕೇವಲ 40,128 ಕೊರೋನಾ ಸಕ್ರಿಯ ಪ್ರಕರಣಗಳು ಮಾತ್ರ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com