ಕೋವಿಡ್-19: ದೆಹಲಿಯ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ ಡೌನ್ ಹೇರಲು ಕೇಂದ್ರದ ಅನುಮತಿ ಕೋರಿದ ಕೇಜ್ರಿವಾಲ್ 

ಕೋವಿಡ್-19 ಹಾಟ್ ಸ್ಪಾಟ್ ಗಳಾಗಿ ರೂಪುಗೊಳ್ಳುವ ಸಾಧ್ಯತೆಯಿರುವುದರಿಂದ ರಾಷ್ಟ್ರ ರಾಜಧಾನಿಯ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ ಡೌನ್ ವಿಧಿಸಲು ಕೇಂದ್ರ ಸರ್ಕಾರದಿಂದ ಅನುಮತಿಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

ನವದೆಹಲಿ: ಕೋವಿಡ್-19 ಹಾಟ್ ಸ್ಪಾಟ್ ಗಳಾಗಿ ರೂಪುಗೊಳ್ಳುವ ಸಾಧ್ಯತೆಯಿರುವುದರಿಂದ ರಾಷ್ಟ್ರ ರಾಜಧಾನಿಯ ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ ಡೌನ್ ವಿಧಿಸಲು ಕೇಂದ್ರ ಸರ್ಕಾರದಿಂದ ಅನುಮತಿಯನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ್ದಾರೆ. ವಿವಾಹ ಮಹೋತ್ಸವದಲ್ಲಿ 200 ಅತಿಥಿಗಳು ಭಾಗವಹಿಸಲು ನೀಡಿರುವ ಆದೇಶವನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

ಆನ್ ಲೈನ್ ನಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ವಿವಾಹ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಈ ಹಿಂದೆ ಮಿತಿಗೊಳಿಸಲಾಗಿದ್ದ 200 ಜನರ ಬದಲಿಗೆ 50 ಜನರಿಗೆ ಅವಕಾಶ ನೀಡುವಂತೆ ಲೆಫ್ಟಿನೆಂಟ್ ಗೌರ್ನರ್ ಗೆ ದೆಹಲಿ ಸರ್ಕಾರ ಪ್ರಸ್ತಾವನೆ ಕಳುಹಿಸಿದ್ದು, ಕೋವಿಡ್-19 ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ಎಲ್ಲಾ ಏಜೆನ್ಸಿಗಳು ತೀವ್ರ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.

ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್ ಡೌನ್ ವಿಧಿಸಲು ದೆಹಲಿ ಸರ್ಕಾರಕ್ಕೆ ಅಧಿಕಾರ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಜನತೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com